ಬ್ರಹ್ಮಾವರ: ಹೈನುಗಾರಿಕೆ ನಿರ್ವಹಣೆಯಲ್ಲಿ ಇಂದು ಬಹಳಷ್ಟು ಬದಲಾವಣೆಗಳಾಗಿವೆ. ಹೊಸ ವಿಚಾರಗಳನ್ನು ಅಳವಡಿಸಿಕೊಂಡು ಮುನ್ನಡೆದರೆ ಹೈನುಗಾರಿಕೆ ಲಾಭದಾಯಕವಾಗುತ್ತದೆ ಎಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಹೇಳಿದರು.
ಅವರು ಬುಧವಾರ ಇಲ್ಲಿನ ರೋಟರಿ ಭವನದಲ್ಲಿ ಕರ್ನಾಟಕ ಹಾಲು ಮಹಾಮಂಡಲ ಬೆಂಗಳೂರು, ಮೈಸೂರು ತರಬೇತಿ ಕೇಂದ್ರ, ದ.ಕ. ಹಾಲು ಒಕ್ಕೂಟ, ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಹೈನು ರಾಸು ನಿರ್ವಹಣೆ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಹಸುಗಳ ಆಹಾರ ಪದ್ಧತಿಯಲ್ಲಿ ಬದಲಾವಣೆಗಳಾಗುತ್ತಿವೆ. ಹೈನುಗಾರಿಕೆ ಡಿಜಟಲೀಕರಣಗೊಳ್ಳಲಿದೆ ಎಂದರು.
ಒಕ್ಕೂಟದ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ರೋಟರಿ ಅಧ್ಯಕ್ಷ ಬಿ.ಶ್ರೀಧರ ಆಚಾರ್ಯ, ಕಾರ್ಯದರ್ಶಿ ಗಣೇಶ್ ಉಪಾಧ್ಯಾ, ಒಕ್ಕೂಟದ ಉಪವ್ಯವಸ್ಥಾಪಕ ಡಾ| ಅನಿಲ್ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಡಾ| ಶಿವಶಂಕರ್, ಮಹಾದೇವ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಸಹಾಯಕ ವ್ಯವಸ್ಥಾಪಕರಾದ ಶಿವಪ್ಪ ಸ್ವಾಗತಿಸಿ, ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.