ಬ್ರಹ್ಮಾವರ: ವಿಷ ಸೇವಿಸಿ ಗಂಭೀರವಾಗಿ ಗಾಯಗೊಂಡಿದ್ದ ಬ್ರಹ್ಮಾವರ ಹಂದಾಡಿ ಬೇಳೂರು ಜೆಡ್ಡು ನಿವಾಸಿ ಬೆನ್ನಿ ಶೈಜಾ ಥೋಮಸ್ (30) ಚಿಕಿತ್ಸೆ ಫಲಕಾರಿಯಾಗದೆ ನ. 5 ರಂದು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ಈ ರೀತಿ ಕೃತ್ಯಕ್ಕೆ ಮುಂದಾಗಿದ್ದಾರೆ ಎನ್ನಲಾಗಿದ್ದು ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾಸ್ಕರದಾಸ್ ಎಕ್ಕಾರು ಅಪಘಾತದಲ್ಲಿ ಸಾವು
ಮಂಗಳೂರು: ಅಲೆಮಾರಿ ಸಮುದಾಯಗಳ ಹೋರಾಟಗಾರ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಸದಸ್ಯ ಭಾಸ್ಕರದಾಸ್ ಎಕ್ಕಾರು (65) ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿದರು.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ಮಾರ್ಗದಲ್ಲಿ ಕುಣಿಗಲ್ ಸಮೀಪ ರಸ್ತೆ ಅಪಘಾತದಲ್ಲಿ ತೀವ್ರ ಅಸ್ವಸ್ಥರಾಗಿದ್ದ ಭಾಸ್ಕರದಾಸ್ ಅವರನ್ನು ಬೆಂಗಳೂರಿನ ಖಾಸಗಿ ಅಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಿಸಲಾಗಿತ್ತು. ರವಿವಾರ ಅವರು ಮೃತಪಟ್ಟರು.
Related Articles