Advertisement
ಚಾಂತಾರು ರೈಲ್ವೇ ಅಂಡರ್‌ಪಾಸ್ ಬಳಿ ನಡೆಯುತ್ತಿರುವ ಕಾಮಗಾರಿ ಯಿಂದ ಸಮಸ್ಯೆ ಉಂಟಾಗಿದೆ. ಮಳೆ ಹಾನಿ ಯೋಜನೆಯಡಿ ಕಾಂಕ್ರೀಟ್‌ನಿಂದ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಪ್ರತಿದಿನ ಅಡಚಣೆಯಾಗುತ್ತಿದೆ. ಪ್ರತಿವರ್ಷ ಮಳೆಗಾಲದಲ್ಲಿ ಭಾರೀ ಮಳೆ ಸುರಿದಾಗ ಚರಂಡಿ ಇದ್ದರೂ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಆದರೆ ಈ ಬಾರಿ ರಸ್ತೆ ಕಾಮಗಾರಿಯಿಂದ ಇದ್ದ ಚರಂಡಿ ಮುಚ್ಚಿ ಹೋಗಿದ್ದು, ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುವ ಈ ರಸ್ತೆಯನ್ನು ತಾತ್ಕಾಲಿಕವಾಗಿಯಾದರೂ ಸಂಬಂಧಪಟ್ಟ ಇಲಾಖೆ, ಗುತ್ತಿಗೆದಾರರು ಕೂಡಲೇ ದುರಸ್ತಿ ಗೊಳಿಸಬೇಕೆಂದು ವಾಹನ ಸವಾರರು ಆಗ್ರಹಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳ ಮತ್ತು ಖಾಸಗಿ ಬಸ್‌ಸಂಚಾರ ಇನ್ನೂ ಆರಂಭವಾಗಿಲ್ಲ. ಆದರೂ ರೈಲ್ವೇ ಸೇತುವೆ ಬಳಿ ಅವೈಜ್ಞಾನಿಕ ಕಾಮಗಾರಿ ಮತ್ತು ಏಕಮುಖ ಸಂಚಾರ ದಿಂದ ಪ್ರತಿದಿನ ವಾಹನ ಸವಾರರು ಪರದಾಡುತ್ತಿದ್ದಾರೆ. ಶಾಲೆ ಆರಂಭ ಗೊಂಡರೆ ದುಃಸ್ಥಿತಿ ಇನ್ನಷ್ಟು ಬಿಗಡಾಯಿ
ಸುವ ಸಾಧ್ಯತೆ ಇದೆ. ಪಾದಚಾರಿಗಳಿಗೆ ಮಾತ್ರ ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇಲ್ಲಿದೆ.