Advertisement
ಬಿಜು ಯೋಹನ್ ಮೈ ಮೇಲೆ ಹೊಡೆದ ಗುರುತುಗಳು ಇರುವ ಕಾರಣ ನಿಧನದಲ್ಲಿ ಸಂದೇಹ ಇದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಮೃತರ ಸಹೋದರ ದೂರು ನೀಡಿದ್ದಾರೆ. ಕೇರಳ ಕಲ್ಚರ್ ಮತ್ತು ಸೋಶಿಯಲ್ ಸಂಘ, ಕೇರಳ ಸಮಾಜ ಸಂಘದ ಪದಾಧಿಕಾರಿಗಳು ಪಾರದರ್ಶಕ ತನಿಖೆ ಹಾಗೂ ನ್ಯಾಯಕ್ಕೆ ಮನವಿ ಮಾಡಿದ್ದಾರೆ. ಪ್ರಕರಣ ಕುರಿತು ನ್ಯಾಯಾಧೀಶರು ವಿಚಾರಣೆ ನಡೆಸಿದರು.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಠಾಣೆ ಪೊಲೀಸ್ ಉಪನಿರೀಕ್ಷಕ ಮತ್ತು ಹೆಡ್‌ಕಾಸ್ಟೆಬಲ್ ಅವರನ್ನು ಅಮಾನತು ಮಾಡಲಾಗಿದೆ. ಠಾಣಾಧಿಕಾರಿ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿ ಸುಜಾತಾ ಅವರನ್ನು ಉಡುಪಿ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Related Articles
ಪ್ರಕರಣದ ತನಿಖೆಗೆ ಸೋಮವಾರ ಬೆಂಗಳೂರಿನಿಂದ ಸಿಐಡಿ ಪೊಲೀಸರ ತಂಡ ಆಗಮಿಸಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಿಂದ ಮಾಹಿತಿ ಸಂಗ್ರಹಿಸಿದ ಸಿಐಡಿ ಪೊಲೀಸರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಮೃತದೇಹ ಪರಿಶೀಲಿಸಿ, ವೈದ್ಯಾಧಿಕಾರಿಗಳನ್ನು ಭೇಟಿ ಮಾಡಿ ವಿವರಣೆ ಪಡೆದುಕೊಂಡಿದ್ದಾರೆ.
Advertisement