Advertisement

ಕೃಷಿ ಮೇಳಕ್ಕೆ ಸಜ್ಜುಗೊಂಡ ಬ್ರಹ್ಮಾವರ

11:57 AM Oct 19, 2019 | sudhir |

ಬ್ರಹ್ಮಾವರ/ಉಡುಪಿ: ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಅ.19 ಮತ್ತು 20ರಂದು ಕೃಷಿ ಮೇಳ ಜರಗಲಿದೆ.

Advertisement

ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಶಿವಮೊಗ್ಗದ ಅಂಗ ಸಂಸ್ಥೆಯಾದ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರ ಬ್ರಹ್ಮಾವರ ಮತ್ತು ಉಳ್ಳಾಲ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ಮಂಗಳೂರು, ಕೃಷಿ ಡಿಪ್ಲೊಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ಮಂಗಳೂರು ಇವರ ಸಂಯುಕ್ತ ಸಹಯೋಗದಲ್ಲಿ ಗೇರು ಮತ್ತು ಕೋಕೋ ನಿರ್ದೇಶನಾಲಯ, ಕೊಚ್ಚಿ, ಕೆನರಾ ಬ್ಯಾಂಕ್‌ ಮತ್ತು ಕೃಷಿ ಇಲಾಖೆ ಸಹ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಕಾಲ ಕೃಷಿ ಮೇಳ 2019 ಆಯೋಜಿಸಿದೆ ಎಂದು ಕೇಂದ್ರದ ಸಹ ಸಂಶೋಧನ ನಿರ್ದೇಶಕ ಡಾ|ಎಸ್‌.ಯು.ಪಾಟೀಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗೋಷ್ಠಿಯಲ್ಲಿ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|ಕೆ.ವಿ.ಸುಧೀರ್‌ ಕಾಮತ್‌, ಕೇಂದ್ರದ ವಿಜ್ಞಾನಿಗಳಾದ ಡಾ|ಧನಂಜಯ ಬಿ., ಹಿರಿಯ ಕ್ಷೇತ್ರಾಧೀಕ್ಷಕ ಡಾ|ಶಂಕರ ಎಂ. ಉಪಸ್ಥಿತರಿದ್ದರು.

ಉದ್ದೇಶಗಳು
ನೂತನ ಕೃಷಿ ತಂತ್ರಜ್ಞಾನಗಳನ್ನು ನೋಡಿ ತಿಳಿಯುವುದು, ಚರ್ಚಾಗೋಷ್ಠಿಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು, ಕ್ಷೇತ್ರ ಭೇಟಿಗಳ ಮೂಲಕ ಬೆಳೆ ಪ್ರಾತ್ಯಕ್ಷಿಕೆಗಳನ್ನು ನೋಡಿ ಅಲ್ಲಿಯ ತಜ್ಞರೊಂದಿಗೆ ಸಮಾಲೋಚನೆ ನಡೆಸುವುದು, ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ವಿವಿಧ ಸಂಸ್ಥೆಗಳು ಅಭಿವೃದ್ಧಿ ಪಡಿಸಿದ ತಂತ್ರಜ್ಞಾನ ಹಾಗೂ ಉಪಕರಣಗಳ ಬಗೆಗಿನ ಸಂಪೂರ್ಣ ಮಾಹಿತಿ ಸ್ಥಳದಲ್ಲೇ ಒದಗಿಸುವುದು ಕೃಷಿ ಮೇಳದ ಮುಖ್ಯ ಉದ್ದೇಶವಾಗಿದೆ. ಕೃಷಿ ಸಂಬಂಧಿ ತ ಸಮಸ್ಯೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರವನ್ನು ಕಲ್ಪಿಸುವ ಪ್ರಯತ್ನ ಇದಾಗಿದೆ.

ಉದ್ಘಾಟನೆ
ಉಪ ಮುಖ್ಯಮಂತ್ರಿ ಮತ್ತು ಕೃಷಿ ಸಚಿವ ಲಕ್ಷ ¾ಣ ಸವದಿ ಅವರು ಕೃಷಿ ಮೇಳ ಉದ್ಘಾಟಿಸಲಿದ್ದು, ವಸ್ತು ಪ್ರದರ್ಶನವನ್ನು ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್‌ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನೂತನ ಭತ್ತದ ತಳಿ ಸಹ್ಯಾದ್ರಿ ಪಂಚಮುಖೀ ತಳಿಯನ್ನು ಬಿಡುಗಡೆ ಗೊಳಿಸುವರು. ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆ ವಹಿಸುವರು.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಕುಲಪತಿ ಡಾ| ಎಂ.ಕೆ. ನಾಯ್ಕ, ಸಂಸದೆ ಶೋಭಾ ಕರಂದ್ಲಾಜೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮತ್ತು ವಿಶ್ವವಿದ್ಯಾನಿಲಯದ ಹಿರಿಯ ಅಧಿಕಾರಿಗಳು ಹಾಗೂ ವಿಶ್ವವಿದ್ಯಾನಿಲಯದ ಮೇಲ್ವಿಚಾರಣಾ ಸಮಿತಿಯ ಸದಸ್ಯರು ಮತ್ತು ಅನೇಕ ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುವರು.

Advertisement

ವಿಚಾರ ಸಂಕಿರಣ
ಮೊದಲನೆ ದಿನ ಗೇರು ಮತ್ತು ಇತರ ತೋಟಗಗಾರಿಕೆ ಬೆಳೆಗಳ ವಿಚಾರ ಸಂಕಿರಣ ಮತ್ತು ಎರಡನೇ ದಿನ ಲಾಭದಾಯಕ ಸಮಗ್ರ ಕೃಷಿ ಪದ್ಧತಿಗಳು, ನೆಲ ಜಲ ಸಂರಕ್ಷಣೆ, ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಮತ್ತು ಹೈ-ಟೆಕ್‌ ತೋಟಗಾರಿಕೆ ಎಂಬ ವಿಚಾರ ಸಂಕಿರಣಗಳನ್ನು ಏರ್ಪಡಿಸಲಾಗಿದೆ. ಈ ವಿಚಾರ ಸಂಕಿರಣಗಳಲ್ಲಿ ಇಲಾಖಾ ಮುಖ್ಯಸ್ಥರು ಮತ್ತು ಹಿರಿಯ ವಿಜ್ಞಾನಿಗಳು, ಪ್ರಗತಿಪರ ಕೃಷಿಕರು ವಿಷಯ ತಜ್ಞರಾಗಿ ಭಾಗವಹಿಸಿ ಮಾಹಿತಿಯನ್ನು ನೀಡಲಿದ್ದಾರೆ. ರೈತರು ಮುಕ್ತವಾಗಿ ಮುಖಾಮುಖೀ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರಗಳನ್ನು ಪಡೆಯಲು ಅವಕಾಶ ಮಾಡಿಕೊಡಲಾಗುವುದು.

200 ಮಳಿಗೆಗಳು
ಕೃಷಿಮೇಳದಲ್ಲಿ ಸುಮಾರು 200ಕ್ಕೂ ಅಧಿ ಕ ಮಳಿಗೆಗಳು ಇರಲಿವೆ. ವಿವಿಧ ಇಲಾಖೆ, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ಅಭಿವೃದ್ಧಿ ಪಡಿಸಿರುವ ಕೃಷಿ ತಂತ್ರಜ್ಞಾನಗಳ ಮತ್ತು ಕೃಷಿ ಪರಿಕರಗಳ ವಸ್ತು ಪ್ರದರ್ಶನಗಳನ್ನು ಸಹ ನೋಡಬಹುದು.

ನೆರೆ ಪ್ರದೇಶಕ್ಕೆ ಸೂಕ್ತ ತಳಿ ಸಹ್ಯಾದ್ರಿ ಪಂಚಮುಖೀ
ಸಹ್ಯಾದ್ರಿ ಪಂಚಮುಖೀ ಭತ್ತದ ತಳಿಯನ್ನು ಸಂಶೋಧಿಸಲಾಗಿದ್ದು ಇದು ಕೆಂಪಕ್ಕಿ ತಳಿಯಾಗಿದೆ. ನೆರೆ ಪ್ರದೇಶಕ್ಕೆ ಇದು ಸೂಕ್ತ. ಇದರ ಹುಲ್ಲು ದನಗಳಿಗೂ ಉತ್ತಮ. ಕೃಷಿ ಮೇಳದಲ್ಲಿ ತಾರಸಿ ತೋಟ, ಸಾವಯವ ಗೊಬ್ಬರ ತಯಾರಿ, ಜೈವಿಕ ಅನಿಲ ಸಾಧ್ಯತೆ, ಮೀನುಗಾರಿಕೆ, ಬಾತುಕೋಳಿ- ಕೋಳಿ- ಆಡು- ಹೈನುಗಾರಿಕೆ ಕುರಿತು ಮಾಹಿತಿಗಳು ಇರುತ್ತವೆ.
-ಡಾ|ಎಸ್‌.ಯು.ಪಾಟೀಲ್‌

ವಿಶೇಷ ಆಕರ್ಷಣೆಗಳು
– ವಿವಿಧ ಭತ್ತದ ತಳಿಗಳು ಮತ್ತು ಬೀಜೋತ್ಪಾದನೆ
– ಭತ್ತದಲ್ಲಿ ಚಾಪೆ ನೇಜಿ ತಯಾರಿ ಮತ್ತು ಶ್ರೀ ಪದ್ಧತಿ ಬೇಸಾಯ
– ತೆಂಗಿನಲ್ಲಿ ಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ
– ತೋಟಗಾರಿಕಾ ಬೆಳೆಗಳಲ್ಲಿ ಕಸಿ ಕಟ್ಟುವಿಕೆ, ಛಾವಣಿ ಕೈತೋಟ ಮತ್ತು ಮಾಡ ಹಾಗಲ ಪ್ರಾತ್ಯಕ್ಷಿಕೆ
– ಸಾವಯವ ಗೊಬ್ಬರ, ಕಾಂಪೋಸ್ಟ್‌, ಎರೆಗೊಬ್ಬರ ಮತ್ತು ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ
– ಹೈನುಗಾರಿಕೆ, ಮೀನುಗಾರಿಕೆ, ಆಡು, ಮೊಲ, ಕೋಳಿ, ಹಂದಿ ಮತ್ತು ಬಾತುಕೋಳಿ ಸಾಕಾಣಿಕೆ ಪ್ರಾತ್ಯಕ್ಷಿಕೆ
– ಹೈಡ್ರೋ´ೋನಿಕ್ಸ್‌ ವಿಧಾನದಲ್ಲಿ ಮೇವಿನ ಬೆಳೆ ಉತ್ಪಾದನೆ
– ಸಿಓ  4 ಮತ್ತು 5 ಮೇವಿನ ಹುಲ್ಲಿನ ಪ್ರಾತ್ಯಕ್ಷಿಕೆ
– ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ
– ಜೈವಿಕ ಅನಿಲ ಉತ್ಪಾದನಾ ಘಟಕಗಳ ವೀಕ್ಷಣೆ
– ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ
– ಅಲಂಕಾರಿಕ ಗಿಡಗಳ ಪ್ರದರ್ಶನ ಮತ್ತು ಮಾರಾಟ
– ಆಕರ್ಷಕ ಕೃಷಿ ವಸ್ತು ಪ್ರದರ್ಶನ

Advertisement

Udayavani is now on Telegram. Click here to join our channel and stay updated with the latest news.

Next