Advertisement
ಶನಿವಾರ ಗೇರು ಮತ್ತು ಇತರ ತೋಟಗಾರಿಕೆ ಬೆಳೆಗಳ ವಿಚಾರ ಸಂಕಿರಣ ನಡೆಯಿತು. ರವಿವಾರ ಲಾಭದಾಯಕ ಸಮಗ್ರ ಕೃಷಿ ಪದ್ಧತಿಗಳು, ನೆಲ ಜಲ ಸಂರಕ್ಷಣೆ, ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಮತ್ತು ಹೈ-ಟೆಕ್ ತೋಟಗಾರಿಕೆ ವಿಚಾರ ಕುರಿತು ಮಾಹಿತಿ ಕಾರ್ಯಾಗಾರ ಜರಗಿತು. ಇಲಾಖಾ ಮುಖ್ಯಸ್ಥರು, ಹಿರಿಯ ವಿಜ್ಞಾನಿಗಳು, ಪ್ರಗತಿಪರ ಕೃಷಿಕರು ವಿಷಯ ತಜ್ಞರಾಗಿ ಭಾಗವಹಿಸಿ ಮಾಹಿತಿ ನೀಡಿದರು. ರೈತರು ಮುಖಾ ಮುಖೀ ಚರ್ಚೆಯಲ್ಲಿ ಭಾಗವಹಿಸಿದರು.
ವಿವಿಧ ಭತ್ತದ ತಳಿಗಳು ಮತ್ತು ಬೀಜೋತ್ಪಾದನೆ, ಭತ್ತದಲ್ಲಿ ಚಾಪೆ ನೇಜಿ ತಯಾರಿ ಮತ್ತು ಶ್ರೀ ಪದ್ದತಿ ಬೇಸಾಯ, ತೆಂಗಿನಲ್ಲಿ ಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ ತಾಕುಗಳಿದ್ದವು. ತೋಟಗಾರಿಕಾ ಬೆಳೆಗಳಲ್ಲಿ ಕಸಿ ಕಟ್ಟುವಿಕೆ, ಛಾವಣಿ ಕೈತೋಟ ಮತ್ತು ಮಡಹಾಗಲ ಪ್ರಾತ್ಯಕ್ಷಿಕೆ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರೆ ಗೊಬ್ಬರ ಮತ್ತು ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಮೊಲ, ಕೋಳಿ, ಹಂದಿ ಮತ್ತು ಬಾತುಕೋಳಿ ಸಾಕಾಣಿಕೆಯನ್ನು ಮೇಳದಲ್ಲಿ ಭಾಗವಹಿಸಿದವರು ವೀಕ್ಷಿಸಿ ದರು. ಹೈಡ್ರೋಫೋನಿಕ್ಸ್ ವಿಧಾನದಲ್ಲಿ ಮೇವಿನ ಬೆಳೆ ಉತ್ಪಾದನೆ, ಸಿಒ 4 ಮತ್ತು 5 ಮೇವಿನ ಹುಲ್ಲಿನ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ, ಜೈವಿಕ ಅನಿಲ ಉತ್ಪಾದನಾ ಘಟಕಗಳ ವೀಕ್ಷಣೆ, ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ, ಅಲಂಕಾರಿಕ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಕೃಷಿ ವಸ್ತು ಪ್ರದರ್ಶನ ಜರಗಿತು. ಕೃಷಿಮೇಳದಲ್ಲಿ ಸುಮಾರು 200 ಮಳಿಗೆಗಳಿದ್ದು, ಜನರು ವಿವಿಧ ವಸ್ತುಗಳ ಖರೀದಿಯಲ್ಲಿ ತೊಡಗಿದರು.