Advertisement

Brahmavara ವಿಶಾಲ ಗಾಣಿಗ ಕೊಲೆ ಪ್ರಕರಣ; 3 ವರ್ಷದ ಬಳಿಕ ಲಕ್ನೋದಲ್ಲಿ ಮತ್ತೋರ್ವ ಆರೋಪಿ ಬಂಧನ

02:48 PM Feb 03, 2024 | Team Udayavani |

ಉಡುಪಿ: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.

Advertisement

ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.

2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿ ಮೂರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.

ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್‌ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next