Advertisement
ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದು ಹೇಳುತ್ತಲೇ ಪ್ರಹ್ಲಾದ ಜೋಷಿಯವರು “ಒಳ್ಳೆಯ ಬೆಳೆಯಲ್ಲಿ ಪಾರ್ಥೇನಿಯಂ ಇದ್ದಂತೆ’ ಅಂತಲೂ ಕುಟುಕಿದ್ದಾರೆ. ಜತೆಗೆ, ಈ ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಆಗಲಿ. ಬೇಡ ಎಂದವರು ಯಾರು? ನನ್ನ ಸಹಮತವೂ ಇದೆ. ನಾನೂ ಬೆಂಬಲ ಕೊಡುವೆ. ಆದರೆ ಕನ್ನಡ ಪರಂಪರೆ, ಸಂಸ್ಕೃತಿಯ ಮೇಲೆ ದಾಳಿ ನಡೆಸಿದ ಪೇಶ್ವೆಗಳ ಡಿಎನ್‌ಎ ಹೊಂದಿರುವ ವ್ಯಕ್ತಿ ಸಿಎಂ ಆಗಬೇಕಾ ಎನ್ನುವ ಪ್ರಶ್ನೆ ನನ್ನದು ಎಂದು ಅವರು ಹೇಳಿದರು.
Related Articles
Advertisement
ಎಚ್‌ಡಿಕೆ ಹೇಳಿಕೆ ಕ್ಷುಲ್ಲಕ ರಾಜಕಾರಣದ ಪರಮಾವಧಿಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಅವರು ಜಾತ್ಯತೀತ ಜನತಾದಳ ಎಂದು ಹೆಸರಿಟ್ಟುಕೊಂಡು ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಬ್ರಾಹ್ಮಣ ಸಮುದಾಯದ ಒಳಪಂಗಡಗಳ ನಡುವೆಯೇ ಮನಸ್ತಾಪ ಸೃಷ್ಟಿಸುವ ಅವರ ಉದ್ದೇಶ ಈಡೇರುವುದಿಲ್ಲ. ಬ್ರಾಹ್ಮಣರು ಪ್ರಜ್ಞಾವಂತರು, ಸೂಕ್ಷ್ಮ ಸಂವೇದನೆ ಉಳ್ಳ ವಿಚಾರವಂತರು. ಅವರ ಸಮಸ್ಯೆಗಳೇನಿದ್ದರೂ ಅವರೇ ಬಗೆಹರಿಸಿಕೊಳ್ಳುತ್ತಾರೆ. ಈ ಬಗ್ಗೆ ಕುಮಾರಸ್ವಾಮಿ ವಕಾಲತ್ತು ವಹಿಸುವುದಾಗಲಿ, ಲಘುವಾಗಿ ಮಾತನಾಡುವ ಅಗತ್ಯವಾಗಲಿ ಇಲ್ಲ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಕೂಡಲೇ ಬ್ರಾಹ್ಮಣ ಸಮುದಾಯದ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರಹ್ಲಾದ ಜೋಷಿ ಅವರನ್ನು ಮಹಾರಾಷ್ಟ್ರ ಮೂಲದ ಪೇಶ್ವೆಗಳು ಅಥವಾ ದೇಶಸ್ಥ ಬ್ರಾಹ್ಮಣರು ಎಂದು ಮಾಹಿತಿ ಇಲ್ಲದೆ ನಾಲಿಗೆ ಹರಿಬಿಟ್ಟಿರುವುದು ಕ್ಷುಲ್ಲಕ ರಾಜಕಾರಣದ ಪರಮಾವಧಿ ಎಂದಿದ್ದಾರೆ.