Advertisement

24ರಂದು ಬ್ರಾಹ್ಮಣ ಮಹಾಸಭಾ ಚುನಾವಣೆ

01:30 AM Feb 21, 2019 | |

ಬೆಂಗಳೂರು: ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಫೆ.24ರಂದು ಚುನಾವಣೆ ನಡೆಯಲಿದೆ.ಚಾಮರಾಜಪೇಟೆಯ ಚಂದ್ರಶೇಖರ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿರುವ ಬ್ರಾಹ್ಮಣ ಸಮಾಜದ ಒಟ್ಟು 24 ಸಾವಿರ ಮತದಾರರು ಮತ ಚಲಾಯಿಸಲಿದ್ದಾರೆಂದು ಮಹಾಸಭಾದ ಅಧ್ಯಕ್ಷ ಕೆ.ಎನ್‌.ವೆಂಕಟನಾರಾಯಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಫೆ.17ರಂದು ಮೈಸೂರು, ಹಾಸನ, ಶಿವಮೊಗ್ಗ, ಹುಬ್ಬಳ್ಳಿ ಹಾಗೂ ರಾಯಚೂರಿನಲ್ಲಿ ಚುನಾವಣೆ ನಡೆದಿದೆ. 24ರಂದು ಮತದಾನ ನಂತರ ಎಲ್ಲ ಘಟಕಗಳ ಮತ ಎಣಿಕೆ ಕಾರ್ಯ ಪೂರ್ಣಗೊಳಿಸಿ,
ಫ‌ಲಿತಾಂಶ ಪ್ರಕಟಿಸಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next