Advertisement
ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಕಡಬ ಸೈಂಟ್ ಜೋಕಿಮ್ಸ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ವಿನ್ಸೆಂಟ್ ಡಿ’ಸೋಜಾ ಅವರು, ಪ್ರತಿಯೊಬ್ಬರಲ್ಲೂ ಅಮೂಲ್ಯವಾದ ಪ್ರತಿಭೆಗಳಿವೆ. ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವುದೇ ಆತನ ಯಶಸ್ಸಿನ ಮೆಟ್ಟಿಲು ಆಗಿದೆ. ಇನ್ನೊಬ್ಬರ ಪ್ರತಿಭೆಗೆ ಚಪ್ಪಾಳೆ ತಟ್ಟುವುದರ ಬದಲು ತಮ್ಮ ತಮ್ಮ ಪ್ರತಿಭೆಗಳನ್ನು ಕಂಡು ಹಿಡಿದು ಬೆಳೆಸುವುದೇ ಸೂಕ್ತ. ನಮ್ಮನ್ನು ಇತರರಿಗೆ ಹೋಲಿಸುವುದೇ ನಮ್ಮ ಬೆಳವಣಿಗೆಗೆ ಅತಿದೊಡ್ಡ ತೊಡಕು. ಆದ್ದರಿಂದ ದೇವರು ನೀಡಿದ ಅಮೂಲ್ಯ ಪ್ರತಿಭೆ ಅಮೂಲ್ಯವೆಂದೇ ನಂಬಿ ಮುಂದೆ ಸಾಗುವ ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ಜ್ಞಾನೋದಯ ಬೆಥನಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ಫ್ರಾನ್ಸಿಸ್ ತೆಕ್ಕೆಪೂಕಳಂ ಒಐಸಿ ಅವರು ಮಾತನಾಡಿ, ಶಿಕ್ಷಕರು ತಮ್ಮಲ್ಲಿನ ಜ್ಞಾನವನ್ನು ಮಕ್ಕಳಿಗೆ ಧಾರೆ ಎರೆಯಬೇಕು. ವಿದ್ಯಾರ್ಥಿಗಳು ತಮಗೆ ಸಿಕ್ಕಿದ ಅವಕಾಶಗಳನ್ನು ಬಳಕೆ ಮಾಡಿ ಕೊಳ್ಳಬೇಕು. ಇಂದಿನ ಸೋಲು ಮುಂದಿನ ಗೆಲುವಿಗೆ ಸೋಪಾನವಾಗಲಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಮಾತನಾಡಿ, ಬೆಥನಿ ವಿದ್ಯಾಸಂಸ್ಥೆ ಶಿಕ್ಷಣ, ಕ್ರೀಡೆ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ವಿದ್ಯಾರ್ಥಿಗಳು ಮಾದಕ ವ್ಯಸನಗಳಿಂದ ದೂರವಿದ್ದು ನಿಶ್ಚಿತ ಗುರಿಯನ್ನು ಇಟ್ಟುಕೊಂಡಲ್ಲಿ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಬಹುದು ಎಂದರು.
Related Articles
Advertisement
10 ಕಾಲೇಜುಗಳು ಭಾಗಿಕಾಮರ್ಸ್ ಹಾಗೂ ಮ್ಯಾನೇಜ್‌ಮೆಂಟ್‌ಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳು ನಡೆಯಿತು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಸುಮಾರು 10 ಕಾಲೇಜುಗಳ 17 ತಂಡಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಸಂಜೆ ನಡೆದ ಸಮಾರೋಪದಲ್ಲಿ ವಿಜೇತರಿಗೆ ನಗದು ಬಹುಮಾನ, ಟ್ರೋಫಿ ವಿತರಿಸಲಾಯಿತು. ಸಾಪಿಯೆನ್‌ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳೇ ಸಂಘಟಿಸಿದ್ದರು.