Advertisement

ಹೆಚ್ ಡಿಕೆ ವಿಚಾರದಲ್ಲಿ ಶಿಷ್ಟಾಚಾರ ಲೋಪ: ಕಾರ್ಯಪಾಲಕ ಇಂಜಿನಿಯರ್ ಅಮಾನತು

10:17 PM Dec 12, 2022 | Team Udayavani |

ರಾಮನಗರ : ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ (KRIDL) ವತಿಯಿಂದ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿಷಯದಲ್ಲಿ ಶಿಷ್ಟಾಚಾರ ಲೋಪ ಎಸಗಿದ ಅಧಿಕಾರಿ ವಿರುದ್ಧ ರಾಜ್ಯ ಬಿಜೆಪಿ ಸರ್ಕಾರ ಕೊನೆಗೂ ಶಿಸ್ತು ಕ್ರಮ ಕೈಗೊಂಡಿದೆ.

Advertisement

ಮಾಜಿ ಮುಖ್ಯಮಂತ್ರಿಗಳ ವಿಷಯದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಕಾರಣಕ್ಕೆ ರಾಮನಗರ ವಿಭಾಗದ ಪ್ರಭಾರಿ ಕಾರ್ಯಪಾಲಕ ಇಂಜಿನಿಯರ್ ವಿ.ಶ್ರೀಧರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಈ ಬಗ್ಗೆ ಇಂದು ಆದೇಶ ಹೊರಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಜೆ.ಹಿರೇಮಠ್ ಅವರು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.

2022 ಅಕ್ಟೋಬರ್ 1ರಂದು  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡದೆ ಹಾಗೂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ವತಿಯಿಂದ ಕೈಗೆತ್ತಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಪೂಜೆ ಮಾಡಲಾಗಿತ್ತು.ಅಲ್ಲದೆ, ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಅಧಿಕಾರಿಗಳ ಬೆಂಬಲದೊಂದಿಗೆ ಕಾಮಗಾರಿಗಳಿಗೆ ಸಾವಿರಾರು ಪೊಲೀಸರ ರಕ್ಷಣೆಯೊಂದಿಗೆ ಪೂಜೆ ಮಾಡಲು ಹೊರಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಹಕ್ಕು ಚ್ಯುತಿ ಆಗಿದೆ ಎಂದು ಸ್ಪೀಕರ್ ಅವರಿಗೆ ದೂರು ನೀಡಿದ್ದರು. ಅಲ್ಲದೆ ಜೆಡಿಎಸ್ ಪಕ್ಷವು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next