Advertisement

ಧಾರಾವಾಹಿ-ರಿಯಾಲಿಟಿ ಶೋ ಶೂಟಿಂಗ್ ಗೆ ಬ್ರೇಕ್ : ಬಿಗ್ ಬಾಸ್ ನಲ್ಲಿ ಈ ವಾರವೂ ಕಾಣಲ್ಲ ಕಿಚ್ಚ!

03:03 PM May 08, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಟಿವಿ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.

Advertisement

ಕೋವಿಡ್ ಕಾರಣದಿಂದ ರೆಸಾರ್ಟ್ ಗಳಲ್ಲಿ ನಡೆಯುವ ಚಿತ್ರೀಕರಣವನ್ನು ನಿಲ್ಲಿಸಲಾಗುವುದು. ಮೇ 10 ರಿಂದ 24 ರವರೆಗೆ ಯಾವುದೇ ಶೂಟಿಂಗ್ ಮಾಡುವಂತಿಲ್ಲ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಇದೇ ಹಿನ್ನೆಲೆಯಲ್ಲಿ ಬಿಗ್ ಬಾಸ್ ವಾರಂತ್ಯ ಕಾರ್ಯಕ್ರಮ ಕೂಡ ನಿಲ್ಲಲಿದೆ. ಈ  ಬಗ್ಗೆ ಕಲರ್ಸ್ ಕನ್ನಡ ಟ್ವೀಟ್ ಮಾಡಿದ್ದು, ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಎಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next