ವಾಷಿಂಗ್ಟನ್: ಈ ತಿಂಗಳಾಂತ್ಯದಲ್ಲಿ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಲು ಕಾತರನಾಗಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಾತ್ರವಲ್ಲದೆ ಸಾಧ್ಯವಾದರೆ ವ್ಯಾಪರ ಒಪ್ಪಂದಕ್ಕೆ ಸಹಿ ಹಾಕುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಡೊನಾಲ್ಡ್ ಟ್ರಂಪ್ ಫೆಬ್ರವರಿ 24-25ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಅಮೆರಿಕ ಅಧ್ಯಕ್ಷರ ಭೇಟಿ ಬಹಳ ವಿಶೇಷವಾದದ್ದು ಮತ್ತು ಭಾರತವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಇದು ಬಹಳ ಸಹಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಭಾರತಕ್ಕೆ ಆಹ್ವಾನಿಸಿರುವುದು ಬಹಳ ದೊಡ್ಡ ಗೌರವ, ಮಾರ್ಕ್ ಜುಕರ್‌ಬರ್ಗ್ ಇತ್ತೀಚೆಗೆ “ಡೊನಾಲ್ಡ್ ಜೆ. ಟ್ರಂಪ್ ಫೇಸ್‌ಬುಕ್‌ನಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. ಭಾರತದ ಪ್ರಧಾನಿ ಮೋದಿ 2ನೇ ಸ್ಥಾನದಲ್ಲಿದ್ದಾರೆ ಎಂದು ತಿಳಿಸಿದ್ದರು. ವಾಸ್ತವವಾಗಿ, ನಾನು ಎರಡು ವಾರಗಳಲ್ಲಿ ಭಾರತಕ್ಕೆ ಹೋಗುತ್ತಿದ್ದೇನೆ. ಮತ್ತು ಅದನ್ನು ಎದುರು ನೋಡುತ್ತಿದ್ದೇನೆ !’ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ಅಮೆರಿಕಾದ ಪ್ರಥಮ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಕೂಡಿತ್ತೀಚಿಗೆ ಪ್ರಧಾನಿ ಮೋದಿಯವರಿಗೆ ಟ್ವೀಟ್ಟರ್ ನಲ್ಲಿ ಧನ್ಯವಾದ ಅರ್ಪಿಸಿದ್ದು, ಅಹಮದಾಬಾದ್ ಮತ್ತು ನವದೆಹಲಿಗೆ ಭೇಟಿ ನೀಡುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದರು.
21 ನೇ ಶತಮಾನದಲ್ಲಿ ಭಾರತಕ್ಕೆ ಅಮೆರಿಕಾ ಅಧ್ಯಕ್ಷರ ಮೊದಲ ದ್ವಿಪಕ್ಷೀಯ ಭೇಟಿಯಾಗಿದ್ದು, ತಮ್ಮ ವಿರುದ್ಧ ವಾಗ್ದಂಡನೆಯಿಂದ ಖುಲಾಸೆಗೊಂಡ ನಂತರದ ಮೊದಲ ಪ್ರವಾಸ ಇದಾಗಿದೆ. ಡೊನಾಲ್ಡ್ ಟ್ರಂಪ್ , ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೊಸದಾಗಿ ನಿರ್ಮಿಸಲಾದ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಮೊಟೆರಾ ದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಐತಿಹಾಸಿಕ ಭಾಷಣ ಮಾಡುವ ನಿರೀಕ್ಷೆಯಿದೆ.