Advertisement

ಲಕ್ಷ ಮಹಿಳೆಯರಲ್ಲಿ 40 ಮಂದಿಯಲ್ಲಿ ಸ್ತನ ಕ್ಯಾನ್ಸರ್‌

12:08 PM Oct 09, 2021 | Team Udayavani |

ಬೆಂಗಳೂರು: ರಾಜಧಾನಿಯ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಹೆಚ್ಚಳವಾಗುತ್ತಿದ್ದು, ಪ್ರತಿ ಒಂದು ಲಕ್ಷ ಮಹಿಳೆಯರಲ್ಲಿ 40 ಮಂದಿಯಲ್ಲಿ ಈ ಕ್ಯಾನ್ಸರ್‌ ಪತ್ತೆಯಾಗುತ್ತಿದೆ. ಅಲ್ಲದೆ, ದೇಶದ ಮಹಾನಗರ ಪೈಕಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಸ್ತನ ಕ್ಯಾನ್ಸರ್‌ ನಿಯಂತ್ರಣ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಹಲವಾರು ಕ್ರಮ ಕೈಗೊಂಡರೂ ಪ್ರಕರಣಗಳು ಉಲ್ಬಣವಾಗುತ್ತಿವೆ. ರಾಜಧಾನಿಯಲ್ಲಿ ಸ್ತನ ಕ್ಯಾನ್ಸರ್‌ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಶೇ.4 ರಷ್ಟು ಹೆಚ್ಚಾಗುತ್ತಿವೆ.

Advertisement

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸ್ತನ ಕ್ಯಾನ್ಸರ್‌ ಕುರಿತಂತೆ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬಯಲಾಗಿದೆ. ಅಧ್ಯಯನದ ಪ್ರಕಾರ ರಾಜ್ಯದಲ್ಲಿ ವಾರ್ಷಿಕವಾಗಿ 9,800 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗುತ್ತಿದೆ. ಸದ್ಯ 26 ರಿಂದ 30 ಸಾವಿರ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ 1,688 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗಿದ್ದು, 4500 ರೋಗಿಗಳು ಚಿಕಿತ್ಸೆ ಆರೈಕೆಯಲ್ಲಿದ್ದಾರೆ. ರಾಜ್ಯದಲ್ಲಿ ಒಂದು ಲಕ್ಷ ಮಹಿಳೆಯರಲ್ಲಿ 24 ರಿಂದ 26 ಮಂದಿ ಸ್ತನ ಕ್ಯಾನ್ಸರ್‌ ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿಯೇ 2018 ರಲ್ಲಿ ಪ್ರತಿ ಒಂದು ಲಕ್ಷ ಮಹಿಳೆಯರಲ್ಲಿ 34 ಮಹಿಳೆಯರಲ್ಲಿ ಪತ್ತೆಯಾಗುತ್ತಿತ್ತು.

ಸದ್ಯ ಸಮಸ್ಯೆಗೆ ಒಳಗಾದವರ ಸಂಖ್ಯೆ ಹೆಚ್ಚಾಗಿದ್ದು,ಪ್ರತಿ ಒಂದು ಲಕ್ಷ ಮಂದಿಯಲ್ಲಿ 40 ಮಹಿಳೆಯರಿರುವುದು ತಿಳಿದುಬಂದಿದೆ. ಮೊದಲ ಸ್ಥಾನದಲ್ಲಿ ಚೆನ್ನೈ (1 ಲಕ್ಷಕ್ಕೆ 42 ಮಹಿಳೆಯರು) ಇದ್ದು, ಆನಂತರ ದೆಹಲಿ, ಮುಂಬೈ ಮಹಾನಗರಗಳಿವೆ ಎಂದು ಕಿದ್ವಾಯಿ ಸಂಸ್ಥೆಯ ನಿರ್ದೇಶಕಡಾ.ರಾಮಚಂದ್ರ ಮಾಹಿತಿ ನೀಡಿದರು. ದೇಶದ  ಇತರೆ ಮಹಾನಗರಗಳು ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಹೆಚ್ಚಿನ ಜಾಗೃತಿ ಹೊಂದಿರುವ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವಿರುವ ಬೆಂಗಳೂರಿನಲ್ಲಿಯೇ ಸ್ತನ ಕ್ಯಾನ್ಸರ್‌ ಹೆಚ್ಚಿರುವುದು ಆತಂಕಕಾರಿ ಅಂಶವಾಗಿದೆ.

ಇದನ್ನೂ ಓದಿ;- ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೊ ಪ್ರಕರಣ ದಾಖಲು

Advertisement

ಚಿಕ್ಕ ವಯಸ್ಸಿನವರಲ್ಲೂ ಪತ್ತೆ: ಈಗ 20 ವರ್ಷದ ಯುವತಿಯರಲ್ಲೂ ಸ್ತನ ಕ್ಯಾನ್ಸರ್‌ ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗೆ ಕಿದ್ವಾಯಿ ಆಸ್ಪತ್ರೆಯಲ್ಲಿ 20 ವರ್ಷದಯುವತಿಯೊಬ್ಬರು ಸ್ತನ ಕ್ಯಾನ್ಸರ್‌ ಶಸ್ತ್ರ ಚಿಕಿತ್ಸೆ ಪಡೆದಿದ್ದಾರೆ. ಕಳೆದ ವರ್ಷ 20ರಿಂದ 25 ವರ್ಷದ ಐದಾರು ಯುವತಿಯರು ಸ್ತನ ಕ್ಯಾನ್ಸರ್‌ ಚಿಕಿತ್ಸೆಪಡೆದ್ದಾರೆ ಎಂದು ತಜ್ಞರು ತಿಳಿಸಿದ್ದಾ ರೆ.

ಆರಂಭಿಕ ಹಂತದÇÉೇ ಜಾಗೃತಿ ಅತ್ಯವಶ್ಯಕ: ನಗರದ ಸುಶಿಕ್ಷಿತ ಮಂದಿಯಲ್ಲಿಯೇ ಹೆಚ್ಚಾಗಿ ಸ್ತನ ಕ್ಯಾನ್ಸರ್‌ಕಾಣಿಸಿಕೊಳ್ಳುತ್ತಿದ್ದರೂ ಆರಂಭಿಕ ಹಂತದÇÉೇ ಪತ್ತೆಯಾಗದಿರುವುದು, ಸೂಕ್ತ ಚಿಕಿತ್ಸೆ ಪಡೆಯದೆ ಮೃತ ಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದೆ. ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್‌ ಪತ್ತೆಯಾದರೆ ಶೇ. 80ಕ್ಕಿಂತ ಹೆಚ್ಚು ರೋಗಿಗಳು ಗುಣಮುಖರಾಗಬಹುದು. ಮೊದಲನೇ ಮತ್ತು ಎರಡನೇ ಹಂತದಲ್ಲಿದ್ದಾಗ ಶೇ.20 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿ¨ªಾರೆ ಎನ್ನುತ್ತಾರೆ ವೈದ್ಯರು.

ಸ್ತನ ಕ್ಯಾನ್ಸರ್‌ ಲಕ್ಷಣವೇನು?

ಸ್ತನದಲ್ಲಿ ಗಂಟು, ಸ್ತನ ಗಾತ್ರ ಜಾಸ್ತಿಯಾಗುವುದು, ತೊಟ್ಟಿನಲ್ಲಿ ಹುಣ್ಣು ಕಾಣಿಸಿಕೊಂಡಾಗ, ಸ್ತನದ ತೊಟ್ಟಿನಲ್ಲಿ ದ್ರವದಂತಹ ವಸ್ತು ಅಥವಾ ರಕ್ತ ಸ್ರಾವ ಕಂಡುಬಂದರೆ, ಸ್ತನದ ಮೇಲಿನ ಚರ್ಮ ಕೆಂಪಾಗುವಿಕೆ, ಕಂಕಳು ಭಾಗದಲ್ಲಿ ಗಂಟು ಕಾಣಿಸಿಕೊಳ್ಳುವುದು.

ಸ್ತನ ಕ್ಯಾನ್ಸರ್‌ಗೆ ಕಾರಣವೇನು?

ಒತ್ತಡದ ಜೀವನ ಶೈಲಿ, ಮದ್ಯ ಹಾಗೂ ಧೂಮಪಾನ, ಬೊಜ್ಜು, ವಿಳಂಬವಾಗಿ ಮದುವೆ, ತಡ ವಾಗಿ ಮಕ್ಕಳಾಗುವುದು (30 ವರ್ಷದ ನಂತರ), ಚಿಕ್ಕವಯಸ್ಸಿನಲ್ಲಿಯೇಋತುಮತಿ ಹಾಗೂ ತಡವಾಗಿ ಮುಟ್ಟು ನಿಲ್ಲುವುದು. ಋತು ಚಕ್ರದಲ್ಲಿ ದೀರ್ಘಾವಧಿ ವ್ಯತ್ಯಯ, ಮಕ್ಕಳಿಗೆ ಸ್ತನಪಾನ ಮಾಡಿಸಲು ಹಿಂಜರಿಕೆ. ವಂಶವಾಹಿ.

Advertisement

Udayavani is now on Telegram. Click here to join our channel and stay updated with the latest news.

Next