Advertisement

ಮಕ್ಕಳಿಗೆ ಎದೆಹಾಲುಣಿಸಿ ಆರೋಗ್ಯ ಕಾಪಾಡಿ

12:51 PM Aug 02, 2018 | Team Udayavani |

ಮೈಸೂರು: ಬಾಣಂತಿಯರು ಯಾವುದೇ ಮೌಡ್ಯಗಳ ಆಚರಣೆಯನ್ನು ನಿಲ್ಲಿಸಿ, ಮಕ್ಕಳಿಗೆ ಹಾಲುಣಿಸುವ ಮೂಲಕ ತಮ್ಮ ಹಾಗೂ ಮಗುವಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೆ.ರಾಧಾ ಹೇಳಿದರು. 

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇಂಡಿಯನ್‌ ಡಯಾಬಿಟಿಕ್‌ ಅಸೋಸಿಯೇಷನ್‌ನಿಂದ ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಹುತೇಕ ಬಾಣಂತಿಯರು ವಿವಿಧ ಕಾರಣಗಳಿಂದ ಮಗುವಿಗೆ ಹಾಲುಣಿಸುವುದನ್ನು ನಿಲ್ಲಿಸಲಿದ್ದು, ಇದು ಮಗುವಿನ ಬೆಳವಣಿಗೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.

ಜಾಗೃತಿ ವಹಿಸಿ: ಈಗಾಗಲೇ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ತಾಯಿ ಹಾಲುಣಿಸುವ ಕುರಿತು ಜಾಗೃತಿ ಮೂಡಿಸುವುದು ಕಡಿಮೆಯಾಗಿದೆ. ಹೀಗಾಗಿ ಬಾಣಂತಿಯರು ಯಾವುದೇ ಮೌಡ್ಯಕ್ಕೆ ಸಿಲುಕದೆ, ಮಕ್ಕಳಿಗೆ ಹಾಲುಣಿಸಬೇಕು. ಅಲ್ಲದೆ ಗರ್ಭಿಣಿಯರು ಹಾಗೂ ಬಾಣಂತಿಯರು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.

ಪೌಷ್ಟಿಕ ಆಹಾರ ನೀಡಿ: ಗರ್ಭಿಣಿಯರು ಹಾಗೂ ಬಾಣಂತಿಯರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಮಾತೃ ಪೂರ್ಣ ಹಾಗೂ ಮಾತೃ ವಂದನೆ ಯೋಜನೆಗಳು ಮಹತ್ವದಾಗಿವೆ.

Advertisement

ಮಾತೃ ಪೂರ್ಣ ಯೋಜನೆಯಲ್ಲಿ ಗರ್ಭಿಣಿಯರಿಗೆ ಅನುಕೂಲವಾಗುವ ರೀತಿಯಲ್ಲಿ ಗರ್ಭಾವಸ್ಥೆಯಲ್ಲಿರುವ ಮಕ್ಕಳಿಗೆ ಅಗತ್ಯವಿರುವ ಪೌಷ್ಟಿಕಾಂಶವುಳ್ಳ ಆಹಾರ ನೀಡಲಾಗುತ್ತಿದೆ.

ಇದರಿಂದ ಗರ್ಭದಲ್ಲೇ ಮಗುವಿನ ಉತ್ತಮ ಬೆಳವಣಿಗೆಗೆ ಸಾಧ್ಯವಾಗಲಿದೆ. ಅಲ್ಲದೆ ಆಶಾ ಕಾರ್ಯಕರ್ತೆಯರು ತಿಂಗಳೊಮ್ಮೆ ಗಂರ್ಭಿಣಿಯರ ತೂಕ ಅಳತೆ ಮಾಡಿ, ಅವರೊಂದಿಗೆ ಆಪ್ತ ಸಮಾಲೋಚನೆ ಮಾಡಬೇಕು ಎಂದು ಸಲಹೆ ನೀಡಿದರು. 

ಕಾರ್ಯಕ್ರಮದಲ್ಲಿ ಮುಕ್ತ ವಿವಿ ಸಹಾಯಕ ಪ್ರಾಧ್ಯಾಪಕಿ ಡಾ. ಸಿ.ಅನಿತಾ, ಡಾ.ಸುಷ್ಮಾ, ಆರೋಗ್ಯ ಮತ್ತು ಪೌಷ್ಟಿಕಾಂಶ ಸಲಹೆಗಾರ್ತಿ ನಂದಿನಿ ಮೂರ್ತಿ ಮತ್ತಿತರರು ಹಾಜರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next