Advertisement

ರೈತ ಸಂಘಕ್ಕೆ ಕೋಡಿಹಳ್ಳಿ ರಾಜೀನಾಮೆ ನೀಡಲಿ

03:40 PM May 28, 2022 | Team Udayavani |

ಕೋಲಾರ: ರೈತ ಸಂಘದ ನಾಯಕ ಎಂದು ಹೇಳಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್‌ ಮೇಲೆಹೊತ್ತಿರುವ ಬಹುಕೋಟಿ ಲಂಚದ ಆರೋಪ ಮುಕ್ತವಾಗುವ ತನಕ ಯಾವುದೇ ಕಾರಣಕ್ಕೂ ಹಸಿರುಶಾಲು ಹಾಕಬಾರದು. ಜೊತೆಗೆ ರೈತ ಸಂಘಕ್ಕೆರಾಜೀನಾಮೆ ಕೊಟ್ಟು ಸಾರ್ವಜನಿಕ ಜೀವನದಿಂದಹೊರಗಿರಬೇಕು. ಇಲ್ಲವಾದರೆ ಅವರು ಭಾಗವಹಿಸುವ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಮುತ್ತಿಗೆಹಾಕಲಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಎಚ್ಚರಿಕೆ ನೀಡಿದರು.

Advertisement

ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ವರ್ಷ ನಡೆದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆಯುವ ಸಲುವಾಗಿ 35 ಕೋಟಿ ಲಂಚ ಪಡೆದು ನೌಕರರಿಗೆ ಮತ್ತುರೈತ ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಅದೇ ರೀತಿಬೆಂಗಳೂರು ಸಿಟಿ ಮಾರುಕಟ್ಟೆಯ ಸೊಪ್ಪಿನಹೋರಾಟದಿಂದ ತಿಂಗಳಿಗೆ 60 ಸಾವಿರ ಪಡೆಯುತ್ತಾಇದ್ದು, ಇದು ದಾಖಲೆ ಸಮೇತ ರೈತರು ಬಹಿರಂಗ ಪಡಿಸಿದ್ದರು. ಇಂತಹವರು ರೈತರ ಹೆಸರು ಹೇಳುವುದಕ್ಕೂ ಯೋಗ್ಯತೆ ಇಲ್ಲ ಎಂದರು.

ಲಂಚಕ್ಕಾಗಿ ಮಾತ್ರ ಹೋರಾಟ: ಬರೀ ಲಂಚಕ್ಕಾಗಿ ಮಾತ್ರ ಹೋರಾಟಗಳನ್ನು ಮಾಡುವ ಕೋಡಿಹಳ್ಳಿ ಚಂದ್ರಶೇಖರ್‌ ಸಾವಿರಾರು ಸಾರಿಗೆ ನೌಕರರು ಬೀದಿಗೆ ಬೀಳುವಂತೆ ಮಾಡಿದ್ದಲ್ಲದೆ, ಓರ್ವ ನೌಕರ ಅಮಾನುಷವಾಗಿ ಬಲಿಪಡೆದುಕೊಂಡಿದ್ದಲ್ಲದೆ ನಾಲ್ಕು ನಿಗಮದಲ್ಲಿ ಸುಮಾರು ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಹೊಣೆಗಾರರಾಗಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್‌ ಆರಂಭದಲ್ಲಿ ರಸ್ತೆ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷನಾಗಿ ನೇತೃತ್ವ ವಹಿಸಿಕೊಂಡು ಭ್ರಷ್ಟಾಚಾರಮಾಡಿದ್ದಾರೆ. ಸಾರಿಗೆ ನೌಕರರಿಗೂ ರೈತ ಮುಖಂಡ ಎನಿಸಿಕೊಂಡಿರುವ ಕೋಡಿಹಳ್ಳಿಗೂ ಯಾವುದೇ ಸಂಬಂಧ ಇಲ್ಲ. ಆದರೂ, ಹಣಕ್ಕಾಗಿ ಹೋರಾಟದ ನೇತೃತ್ವವನ್ನು ವಹಿಸಿದ್ದ ಎಂದು ಆರೋಪಿಸಿದರು.

ಕಾನೂನು ಕ್ರಮಕೈಗೊಳ್ಳಿ: ಇತ್ತಿಚಿಗೆ ಖಾಸಗಿ ಸುದ್ದಿವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ಸತತವಾಗಿ ದೆಹಲಿಯ ನಾಲ್ಕು ಗಡಿಗಳಲ್ಲಿ ಸುಮಾರು 1 ವರ್ಷಕ್ಕೂ ಹೆಚ್ಚು ಕಾಲ ನಡೆದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸುಪಡೆಯುವಂತಾ ಹೋರಾಟದಲ್ಲಿ ಸುಮಾರು 3000 ಕೋಟಿ ನೀಡಿದರೆ, ಅಲ್ಲಿಯ ಹೋರಾಟವನ್ನುಸ್ಥಗಿತಗೊಳಿಸಲು ನಾನು ಸಿದ್ಧನಿದ್ದೇನೆ. ಈಗಾಗಲೇ ನಾನು ಅಲ್ಲಿನ ರೈತ ಹೋರಾಟಗಾರರನ್ನು ಮಾತನಾಡಿದ್ದೇನೆ ಎಂದು ಹೇಳಿರುವುದು ಖಂಡನೀಯ.

ರೈತ ಸಂಘದ ಮುಂಚೂಣಿ ನಾಯಕನಾಗಿ ರೈತ ಸಮುದಾಯಕ್ಕೆಹಸಿರು ಶಾಲುಗಳಿಗೆ ಅವಮಾನ ಮಾಡಿದ್ದಾನೆ. ಇವನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ, ಮಾಲೂರುತಾಲೂಕು ಅಧ್ಯಕ್ಷ ಹರೀಶ್‌, ಬಂಗಾರಪೇಟೆ ತಾಲೂಕುಅಧ್ಯಕ್ಷ ತಿಮ್ಮಾರೆಡ್ಡಿ, ಮುಖಂಡರಾದ ಕೃಷ್ಣಮೂರ್ತಿ, ಸುಕನ್ಯಾ, ಗುರಪ್ಪ ಹಾಜರಿದ್ದರು.

ಕೋಡಿಹಳ್ಳಿ ಚಂದ್ರಶೇಖರ್‌ ಹೋರಾಟ ಪ್ರಾರಂಭ ಮಾಡುತ್ತಾರೆ, ಹೋರಾಟದಿಂದ ಜಯ ಸಿಗುವ ತನಕ ಮಾಡಲ್ಲ. ಬರೀ ಲಂಚದ ಹೋರಾಟಗಳಾಗಿವೆ. ನಾವು ಹಸಿರು ಶಾಲು ಸಮಾಜಿಕ ಕಳಕಳಿಯಿಂದ ಹಾಕಿಕೊಂಡು ರೈತರ ಸಮಸ್ಯೆಗಳಿಗೆ ಹೋರಾಟ ಮಾಡಿದರೆ, ಇನ್ನೂ ಕೆಲವರು ಸಂಪಾದನೆಗಾಗಿ ಹಸಿರು ಶಾಲುಗಳನ್ನು ಹಾಕಿಕೊಂಡಿದ್ದಾರೆ.-ಬೆಡಶೆಟ್ಟಿಹಳ್ಳಿ ರಮೇಶ್‌, ರೈತ ಸಂಘದ ಜಿಲ್ಲಾ ಅಧ್ಯಕ್ಷ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next