Advertisement

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

10:18 PM Jan 08, 2025 | Team Udayavani |

ಮಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್‌.ದಿನೇಶ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ತಿರಸ್ಕರಿಸಿದೆ.

Advertisement

ಪದ್ಮಾವತಿ ಎಂಬವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು ವರ್ಷದ ಹಿಂದೆ ಅವರ ಮೊಮ್ಮಗ ಮೂಲ್ಕಿ ತಹಶೀಲ್ದಾರ್‌ ಕಚೇರಿಗೆ ಅರ್ಜಿ ಸಲ್ಲಿಸಿದ್ದರು, ಅದನ್ನು ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗೆ ಕಳುಹಿಸಲಾಗಿತ್ತು. ಒಂದು ವರ್ಷ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ವಿಚಾರಿಸಿದಾಗ ದಿನೇಶ್‌ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇರಿಸಿದ್ದರು.

ಡಿ. 19ರಂದು ಅರ್ಜಿದಾರರಿಂದ ದಿನೇಶ್‌ 4 ಲಕ್ಷ ರೂ. ಲಂಚದ ಹಣವನ್ನು ಸುರತ್ಕಲ್‌ ಬಳಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂಧ್ಯಾ ಎಸ್‌. ಅವರು ವಜಾಗೊಳಿಸಿರುತ್ತಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದಾರೆ ಎಂದು ಮಂಗಳೂರು ಲೋಕಾಯುಕ್ತ ವಿಭಾಗದ ಎಸ್‌ಪಿ ನಟರಾಜ ಎಂ.ಎ. ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next