Advertisement
“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಭಾಗವಾಗಿ ಕಂದಾಯ ಸಚಿವ ಆರ್. ಅಶೋಕ್ ಅವರು ಶಿಗ್ಗಾವಿ ತಾಲೂಕು ಬಾಡ ಗ್ರಾಮದಲ್ಲಿ ನಡೆ ಸಿದ ಗ್ರಾಮ ವಾಸ್ತವ್ಯ ಹಾಗೂ 28 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿ ಯವರು ಮಾತನಾಡಿದರು. ಕಂದಾಯ ಸಚಿವರು ಗ್ರಾಮ ವಾಸ್ತವ್ಯ ಮಾಡುವ ಗ್ರಾಮದಲ್ಲಿ ಅಲ್ಲಿನ ಗ್ರಾಮಸ್ಥರು ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತಾರೆ. ಪ್ರೀತಿಯ ಆತಿಥ್ಯ ನೀಡುತ್ತಾರೆ.
ಪಿಪಿಪಿ ಮಾದರಿಯಲ್ಲಿ ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವ ಯತ್ನ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಇದನ್ನು ಅನುಷ್ಠಾನಗೊಳಿಸಲಾಗುವುದು. ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಹೋಗಲು ಅನೇಕ ಕಡೆ ಬಸ್ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸರಕಾರ ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆಸಿದ್ದು, ಖಾಸಗಿ ಸಹಭಾಗಿತ್ವದಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಮೊದಲ ಪ್ರಯೋಗವನ್ನು ಶಿಗ್ಗಾವಿ ಕ್ಷೇತ್ರದಲ್ಲೇ ಕೈಗೊಳ್ಳುವೆ ಎಂದು ಸಿಎಂ ಹೇಳಿದರು.
Related Articles
ಶಿಗ್ಗಾವಿ-ಸವಣೂರು ಕ್ಷೇತ್ರದ ಜನತೆ ರೊಟ್ಟಿ, ಹೋಳಿಗೆ, ಬುತ್ತಿ ನೀಡಿ ಪ್ರೀತಿ ತೋರಿದ್ದೀರಿ. ನೀವು ನನ್ನನ್ನು ಗೆಲ್ಲಿಸಿದ್ದರಿಂದಲೇ ನಾನು ಸಿಎಂ ಆಗಿ ನಿಮ್ಮ ಮುಂದೆ ನಿಂತಿದ್ದೇನೆ. ನಿಮ್ಮ ಋಣ ತೀರಿಸುವುದು ಅಸಾಧ್ಯ. ನನ್ನ ದೇಹಾಂತ್ಯ ವಾದಾಗ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲೇ ನಡೆಯಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭಾವುಕರಾಗಿ ಹೇಳಿದರು.
Advertisement