Advertisement

ಬ್ರಿಗೇಡ್‌ ಅಭ್ಯಾಸ ವರ್ಗ ಶೀಘ್ರ: ಈಶ್ವರಪ್ಪ

12:42 PM May 07, 2017 | Team Udayavani |

ಮೈಸೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಆಯೋಜಿಸಿದ್ದ ರಾಯಣ್ಣ ಬ್ರಿಗೇಡ್‌ ಕಾರ್ಯಕರ್ತರ ಅಭ್ಯಾಸ ವರ್ಗ ಮುಂದೂಡಲಾಗಿದ್ದು, ಪದಾಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ದಿನಾಂಕ ಪ್ರಕಟಿಸಲಾಗುವುದು ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾರ್ಯಕಾರಿಣಿ ನಡೆಯುವ ವಿಚಾರದಲ್ಲಿ ಸ್ವಲ್ಪ ಗೊಂದಲವಿತ್ತು. ಹೀಗಾಗಿ ಬ್ರಿಗೇಡ್‌ ಕಾರ್ಯ ಕರ್ತರ ಅಭ್ಯಾಸವರ್ಗ ನಿಗದಿ ಮಾಡಲಾಗಿತ್ತು. ಆದರೆ, ಕಾರ್ಯಕಾರಿಣಿ ಸಭೆ ನಡೆಯುವುದು ಖಚಿತವಾಗಿದ್ದರಿಂದ ಅಭ್ಯಾಸ ವರ್ಗವನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ರಾಯಣ್ಣ ಬ್ರಿಗೇಡ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ರಾಯಣ್ಣ ಬ್ರಿಗೇಡ್‌ ಸಾಂಸ್ಕೃತಿಕ ಸಂಘಟನೆಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೇ ಜನವರಿ 27ರಂದು ಬ್ರಿಗೇಡ್‌ ಚಟುವಟಿಕೆ ಮುಂದುವರಿಸಲು ಹೇಳಿದ್ದಾರೆ ಎಂದರು.

ರಾಜ್ಯ ಬಿಜೆಪಿಯಲ್ಲಿ ಕೆಲ ಗೊಂದಲಗಳಿವೆ. ಅದನ್ನು ಒಟ್ಟಿಗೆ ಕುಳಿತು ಚರ್ಚಿಸಿ ಬಗೆಹರಿಸಬೇಕು. ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ರಾಜ್ಯದ ಜನರು ಅಪೇಕ್ಷೆ ಪಟ್ಟಿದ್ದಾರೆ.ಅದರಂತೆ ಎಲ್ಲರೂ ಕುಳಿತು ಚರ್ಚೆ ಮಾಡಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next