Advertisement

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

05:48 PM May 02, 2024 | Team Udayavani |

ಹೊಸದಿಲ್ಲಿ: ಬಿಜೆಪಿ ಗುರುವಾರ ಲೋಕಸಭಾ ಚುನಾವಣೆಗೆ ಪ್ರಮುಖ ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಕೈಸರ್‌ಗಂಜ್‌ನ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಿಜೆಪಿ ಕೈಬಿಟ್ಟು, ಅವರ ಪುತ್ರ ಕರಣ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

Advertisement

ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಪುತ್ರ . 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು.

ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ. ಐದನೇ ಹಂತದಲ್ಲಿ ಮೇ 20 ರಂದು ಕೈಸರ್‌ಗಂಜ್‌ನಲ್ಲಿ ಮತದಾನ ನಡೆಯಲಿದೆ.

ಕಾಂಗ್ರೆಸ್ ಭದ್ರ ಕೋಟೆಯಲ್ಲಿ ಸಚಿವ ಕಣಕ್ಕೆ

2004 ರಿಂದ ಸೋನಿಯಾ ಗಾಂಧಿ ಅವರು ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರ ರಾಯ್ ಬರೇಲಿಯಿಂದ ಹಾಲಿ ಸಚಿವ ದಿನೇಶ್ ಸಿಂಗ್ ಅವರನ್ನು ಮತ್ತೆ ಕಣಕ್ಕಿಳಿಸಿದೆ.

Advertisement

2019 ರಲ್ಲೂ ಕ್ಷೇತ್ರದಿಂದ ದಿನೇಶ್ ಸಿಂಗ್ ಅವರೇ ಬಿಜೆಪಿ ಅಭ್ಯರ್ಥಿಯಾಗಿದ್ದರು. ಈ ಬಾರಿಯ ಸ್ಪರ್ಧೆ ಹೆಚ್ಚು ನಿರ್ಣಾಯಕವಾಗಿದ್ದು, ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾಗಿದ್ದು ಕಾಂಗ್ರೆಸ್ ಇದುವರೆಗೆ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವುದನ್ನು ಘೋಷಿಸಿಲ್ಲ. ದಿನೇಶ್ ಪ್ರತಾಪ್ ಸಿಂಗ್ ಅವರು 2010, 2016 ಮತ್ತು 2022 ರಲ್ಲಿ ಮೂರು ಬಾರಿ ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದು ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಗರಿಷ್ಠ ಮತಗಳನ್ನು ಪಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next