ಬೆಂಗಳೂರು: ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣಾ ಕಣ ರಂಗೇರಿದೆ. ಅ. 3ರಂದು ನಡೆಯಲಿರುವ ಚುನಾವಣೆಯಲ್ಲಿ ಕೆಎಸ್‌ಸಿಎ ಆಡಳಿತ ಚುಕ್ಕಾಣಿಯನ್ನು ಯಾರು ಹಿಡಿಯಲಿದ್ದಾರೆ ಎನ್ನುವ ಕುತೂಹಲ ಗರಿಗೆದರಿದೆ.
ಈ ಬೆನ್ನಲ್ಲೇ ಬೃಜೇಶ್ ಪಟೇಲ್ ಬೆಂಬಲಿತ ಬಣ ಚುನಾವಣೆಗೆ ಸ್ಪರ್ಧಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದೆ. ಈಗ ಅಧಿಕಾರದಲ್ಲಿರುವ ಆಡಳಿತ ವರ್ಗವನ್ನೇ ಬೃಜೇಶ್ ಪಟೇಲ್ ಬೆಂಬಲಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ಸ್ಪರ್ಧಿಸಲಿದ್ದಾರೆ.
ಕಾರ್ಯದರ್ಶಿ ಸ್ಥಾನಕ್ಕೆ ಹಾಲಿ ಜಂಟಿ ಕಾರ್ಯದರ್ಶಿ ಸಂತೋಷ್ ಮೆನನ್, ಖಜಾಂಚಿ ಸ್ಥಾನಕ್ಕೆ ಹಾಲಿ ಕೆಎಸ್‌ಸಿಎ ಮಾಧ್ಯಮ ವಕ್ತಾರ ವಿನಯ್ ಮೃತ್ಯುಂಜಯ ಸ್ಪರ್ಧಿಸುತ್ತಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಜೆ. ಅಭಿರಾಮ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಶವೀರ್ ತರಾಪುರೆ ಕಣಕ್ಕಿಳಿಯಲಿದ್ದಾರೆ.