Advertisement

Brinda Acharya: ಕೌಸಲ್ಯ ಹುಡುಗಿ ಫುಲ್ ಬ್ಯುಸಿ; ಬೃಂದಾ ಕೈ ತುಂಬಾ ಸಿನಿಮಾ

01:55 PM Dec 02, 2023 | Team Udayavani |

ಪ್ರೇಮ್‌ ಅಭಿನಯದ “ಪ್ರೇಮಂ ಪೂಜ್ಯಂ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಕಾಲಿಟ್ಟ ಹುಡುಗಿ ಬೃಂದಾ ಆಚಾರ್ಯ. ಮೊದಲ ಸಿನಿಮಾದಲ್ಲೇ ತನ್ನ ಅಂದ ಮತ್ತು ಅಭಿನಯದ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ ಬೃಂದಾ ಆಚಾರ್ಯ ಈಗ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿ ಸುತ್ತಿರುವ ಮೂಲಕ ಕನ್ನಡ ಚಿತ್ರರಂಗದ ಭರವಸೆಯ ನಾಯಕ ನಟಿಯರ ಸಾಲಿನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

Advertisement

ಇತ್ತೀಚೆಗಷ್ಟೇ ಡಾರ್ಲಿಂಗ್‌ ಕೃಷ್ಣ ಅಭಿನಯದ “ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ಬೃಂದಾ, ಹೊಸ ವರ್ಷಕ್ಕೆ ಮತ್ತೆ ಮೂರು- ನಾಲ್ಕು ವಿಭಿನ್ನ ಸಿನಿಮಾಗಳಲ್ಲಿ ನಾಯಕಿಯಾಗಿ ಹೊಸ ಲುಕ್‌ನಲ್ಲಿ ಎಂಟ್ರಿ ಕೊಡುವ ತಯಾರಿಯಲ್ಲಿದ್ದಾರೆ.

ಸದ್ಯ “ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾ ಬಿಡು ಗ ಡೆ ಯಾಗಿ ಹಿಟ್‌ ಲಿಸ್ಟ್‌ ಸೇರಿದೆ. ಇದರ ನಡುವೆ “ರೀತು’ ಎಂಬ ಮಹಿಳಾ ಪ್ರಧಾನ ಸಿನಿಮಾದಲ್ಲೂ ನಾಯಕಿಯಾಗಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಮುಹೂರ್ತ ನೆರವೇರಿದ್ದು, ಸಿನಿಮಾದ ಚಿತ್ರೀಕರಣ ಕೂಡ ಭರದಿಂದ ನಡೆಯುತ್ತಿದೆ. ಕೆಲ ವರ್ಷಗಳ ಹಿಂದೆ ಮಂಡ್ಯದಲ್ಲಿ ನಡೆದ ನೈಜ ಘಟನೆಯೊಂದನ್ನು ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಬೃಂದಾ ಆಚಾರ್ಯ ಮಂಡ್ಯ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ದೀಕ್ಷಿತ್‌ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾ “ಬ್ಯಾಂಕ್‌ ಆಫ್ ಭಾಗ್ಯಲಕ್ಷ್ಮೀ’ಯಲ್ಲೂ ಬೃಂದಾ ಆಚಾರ್ಯ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮುಹೂರ್ತ ನೆರವೇರಿದ್ದು, ಸದ್ಯ ಈ ಸಿನಿಮಾದ ಚಿತ್ರೀಕರಣ ಸದ್ದಿಲ್ಲದೆ ಆರಂಭವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next