ಬ್ಯಾಡಗಿ: ಕರ್ನಾಟಕದಲ್ಲಿ ಭ್ರಷ್ಟಚಾರ ಮಿತಿಮೀರಿದ್ದು, ಜನರ ತೆರಿಗೆ ಹಣ ಲೂಟಿ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ (ಜೆಸಿಬಿ) ಪಕ್ಷಗಳನ್ನು ಬದಿಗಿಟ್ಟು, ಆಮ್ ಆದ್ಮಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಆಪ್ ಸರ್ಕಾರ ಅಧಿಕಾರಕ್ಕೆ ತರಬೇಕೆಂದು ಎಂ.ಎನ್. ನಾಯಕ ಮನವಿ ಮಾಡಿದರು.
ತಾಲೂಕಿನ ಕಾಗಿನೆಲೆ ಗ್ರಾಮದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪೊರಕೆಯೇ ಪರಿಹಾರ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭ್ರಷ್ಟಾಚಾರ ನಡೆಸದೇ, ಜನರ ತೆರಿಗೆ ಹಣ ಲೂಟಿ ಮಾಡದೇ ಸಮರ್ಪಕ ಯೋಜನೆಗಳನ್ನು ಜಾರಿಗೆ ತಂದಲ್ಲಿ ರಾಜ್ಯವನ್ನು ಯಾವ ಮಟ್ಟದಲ್ಲಿ ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ದೆಹಲಿಯಲ್ಲಿ ಸರ್ಕಾರ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವೇ ಸಾಕ್ಷಿಯಾಗಿದೆ ಎಂದರು.
ಪ್ರಸ್ತುತ ಅಧಿಕಾರದಲ್ಲಿರುವ ಪರ್ಸೆಂಟೇಜ್ ಸರಕಾರ ಕಿತ್ತೂಗೆದು ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವಂತೆ ಮನವಿ ಮಾಡಿದರು. ಇದಕ್ಕೂ ಮುನ್ನ ಗ್ರಾಮದ ಟಿಪ್ಪು ಸರ್ಕಲ್‌ನಿಂದ ಆರಂಭವಾದ ಅಭಿಯಾನ ಆದಿಕೇಶವ ದೇವಸ್ಥಾನ ಮಾರ್ಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಕಸ ಗುಡಿಸುವ ಮೂಲಕ ಜೆಸಿಬಿ ಪಕ್ಷಗಳನ್ನು ತೊಲಗಿಸಿ ಎಂದು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ರಾಜು ಆಲದಹಳ್ಳಿ. ಸರಸ್ವತಿ ಉಳ್ಳಾಗಡ್ಡಿ, ಸಾದಿಕ್ ಕಲ್ಲಾಪುರ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.