ತುಮಕೂರು: ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಲ್ಪಸಂಖ್ಯಾತ ಕಲ್ಯಾಣದ ಪ್ರಧಾನ ಮಂತ್ರಿಗಳ 15 ಅಂಶಗಳ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗುಬ್ಬಿ ಹಾಗೂ ತುಮಕೂರು ತಾಲೂಕಿನಲ್ಲಿ ಹೆಚ್ಚು ಅಲ್ಪಸಂಖ್ಯಾತರ ಮಕ್ಕಳು ಶಾಲೆಯಿಂದ ಹೊರ ಗುಳಿದಿದ್ದಾರೆ. ಹೊರಗುಳಿದ ಮಕ್ಕಳನ್ನು ವಿಶೇಷ ದಾಖಲಾತಿ ಆಂದೋಲನದಡಿ ಮಕ್ಕಳಿಗೆ ಜಾಗೃತಿ ಮೂಡಿಸಿ ಶಾಲೆಗೆ ದಾಖಲಿಸಬೇಕು. ತಂದೆ- ತಾಯಿ ಯರಿಗೆ ಮಕ್ಕಳ ಭವಿಷ್ಯದ ಅರಿವು ಮೂಡಿಸಬೇಕು ಎಂದರು.ಅಲ್ಪಸಂಖ್ಯಾತ ಶಾಲೆಗಳಲ್ಲಿ ವಿದ್ಯಾರ್ಥಿ ನಿಯರ ದಾಖಲಾತಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಡಿಪಿಐ ಕಾಮಾಕ್ಷಿ, ಆರ್ಥಿಕವಾಗಿ ಹಿಂದುಳಿದಿರುವುದರಿಂದ ಮಕ್ಕಳ ಪೋಷಕರೇ ಗ್ಯಾರೇಜ್, ಮತ್ತಿತರ ಕಡೆ ಕೆಲಸಕ್ಕೆ ಕಳುಹಿಸುತ್ತಿ ರುವುದರಿಂದ ಮಕ್ಕಳು ಶಾಲೆಯಿಂದ ಹೊರಗುಳಿ ದಿದ್ದಾರೆ ಎಂದು ಮಾಹಿತಿ ನೀಡಿದರು.
ಉರ್ದು ಶಾಲೆಗಳಿಗೆ ಅವಶ್ಯಕತೆಯಿರುವ ಶೌಚ ಗೃಹ, ಶಾಲಾ ಕಟ್ಟಡ, ಆವರಣ ಗೋಡೆ ಹಾಗೂ ಗ್ರಂಥಾ ಲಯ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಡೀಸಿ ತಾಕೀತು ಮಾಡಿದರು.
ಪೌಷ್ಟಿಕ ಆಹಾರ ಪೂರೈಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ಒಟ್ಟು 228 ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಿದ್ದು, ಈ ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರದ ಕೊರತೆಯಾಗದಂತೆ ಪೂರೈಸಬೇಕು. ಸಂಬಂಧಪಟ್ಟ ಮೇಲ್ವಿಚಾರಕರು ಅಂಗನವಾಡಿ ಕೇಂದ್ರಗಳ ವ್ಯಾಪ್ತಿ ಯಲ್ಲಿರುವ ಮಕ್ಕಳ ಮನೆ, ಮನೆಗೆ ತೆರಳಿ ಅಪೌಷ್ಟಿಕತೆ ಬಗ್ಗೆ ತಿಳಿದು ತಮಗೆ ವರದಿ ಸಲ್ಲಿಸಬೇಕು. ಅಪೌಷ್ಟಿಕ ಮಕ್ಕಳ ಬಗ್ಗೆ ವರದಿಯಾದರೆ ಆಯಾ ಮೇಲ್ವಿಚಾರಕರನ್ನೇ ಹೊಣೆಗಾರ ರನ್ನಾಗಿಸಲಾಗುವುದೆಂದು ಎಚ್ಚರಿಸಿದರು.
ಫಲಾನುಭವಿಗಳಿಗೆ ಚೆಕ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ಮಾತನಾಡಿ, ಇಲಾಖೆ ಯೋಜನೆಯಡಿ ಅಲ್ಪಸಂಖ್ಯಾತ ಮಹಿಳೆಯರಿಗೆ 2019ನೇ ಸಾಲಿನ ಭಾಗ್ಯಲಕ್ಷ್ಮೀ, ಉದ್ಯೋಗಿನಿ, ಸಮೃದ್ಧಿ, ಧನಶ್ರೀ, ಮುಂತಾದ ಯೋಜನೆಗಳ ಮಹಿಳಾ ಫಲಾನುಭವಿಗಳಿಗೆ ತರಬೇತಿ ನೀಡಿ ಚೆಕ್ ವಿತರಿಸಲಾಗಿದೆ ಎಂದು ತಿಳಿಸಿದರು.
ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ ಮಾತನಾಡಿ, ಕೃಷಿ ಇಲಾಖೆಯಿಂದ ಅಲ್ಪಸಂಖ್ಯಾತ ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ತುಂತುರು ನೀರಾವರಿ ಸಾಮಗ್ರಿಗಳು, ಸ್ಪಿಂಕ್ಲರ್, ಬಿತ್ತನೆ ಬೀಜ, ಕೃಷಿ ಯಾಂತ್ರೋಪಕರಣ ಫಲಾನುಭವಿ ರೈತರಿಗೆ ವಿತರಿಸ ಲಾಗುತ್ತಿದೆ ಎಂದು ಹೇಳಿದರು. 15 ಅಂಶಗಳ ಸಮಿತಿ ಸದಸ್ಯ ಖಧೀರ್ ಅಹಮದ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಬಿ.ರಘು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಹಾಗೂ ಮತ್ತಿತರ ಇಲಾಖೆ ಅಧಿಕಾರಿಗಳಿದ್ದರು.