Advertisement

ಹೊರ ರಾಜ್ಯ ಕನ್ನಡಿಗರನ್ನು ಕರೆ ತನ್ನಿ: ಕಾಂಗ್ರೆಸ್‌

12:47 AM May 05, 2020 | Sriram |

ಬೆಂಗಳೂರು: ಕೋವಿಡ್‌- 19ನಿಂದಾಗಿ ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ವಾಪಸ್‌ ಕರೆತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯ ದರ್ಶಿಗಳಿಗೆ ಕಾಂಗ್ರೆಸ್‌ ಆಗ್ರಹಿಸಿದೆ.

Advertisement

ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಿಯೋಗ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಬೇರೆ ರಾಜ್ಯಗಳಲ್ಲಿ ಉದ್ಯೋಗ ಮಾಡುತ್ತಿರುವ ಅನೇಕ ಕನ್ನಡಿಗರು ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಅವರಲ್ಲಿ ಹಲವರು ಕುಟುಂಬದಿಂದ ದೂರ ಉಳಿದಿದ್ದಾರೆ. ಅವರು ಈ ಸಮಯದಲ್ಲಿ ಭವಿಷ್ಯದ ಬಗ್ಗೆ ಯೋಚಿಸುವ ಮುನ್ನ ತಮ್ಮ ಊರಿಗೆ ಮರಳಲು ಇಚ್ಛಿಸುತ್ತಿದ್ದಾರೆ. ಅದೇ ರೀತಿ ಸಾವಿರಾರು ಬೇರೆ ರಾಜ್ಯಗಳ ಜನರು ಕರ್ನಾಟಕವನ್ನು ಕರ್ಮಭೂಮಿಯನ್ನಾಗಿ ಪರಿಗಣಿಸಿ ಈ ನಾಡನ್ನು ಎರಡನೇ ತವರನ್ನಾಗಿ ಪರಿಗಣಿಸಿದ್ದಾರೆ. ಆದರೆ ಅವರು ತಮ್ಮ ರಾಜ್ಯಗಳಲ್ಲಿ ಸಿಲುಕಿದ್ದಾರೆ. ಹೀಗಾಗಿ ಇಲ್ಲಿಗೆ ಬಂದು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ನಿಯೋಗ ಸಿಎಸ್‌ ಅವರಿಗೆ ವಿವರಿಸಿತು.

ಹಣಕಾಸಿನ ಕೊರತೆ, ಭಾವ ನಾತ್ಮಕ ವಿಚಾರ, ವೈಯಕ್ತಿಕ ಕಾರಣ ಗಳಿಂದಾಗಿ ತಮ್ಮ ರಾಜ್ಯಗಳಿಗೆ ಮರಳಲು ಬಯಸುತ್ತಿರುವವರನ್ನು ಬೇರೆ ರಾಜ್ಯ ಸರಕಾರಗಳು ವಾಪಸ್‌ ಕರೆಸಿಕೊಳ್ಳುತ್ತಿವೆ. ಆದರೆ ಈ ವಿಚಾರದಲ್ಲಿ ಕರ್ನಾಟಕ ಮಾತ್ರ ಕನ್ನಡಿಗರು ಮಾಡುತ್ತಿರುವ ಮನವಿ ಯನ್ನು ಪರಿಗಣಿಸದೆ ವಿಭಿನ್ನವಾಗಿ ವರ್ತಿಸುತ್ತಿದೆ. ಬೇರೆ ರಾಜ್ಯಗಳಲ್ಲಿ ಸಿಲುಕಿರುವ ನಮ್ಮ ರಾಜ್ಯದ ಜನರನ್ನು ವಾಪಸ್‌ ಕರೆತರಲು ರೈಲು ವ್ಯವಸ್ಥೆ ಕಲ್ಪಿಸುವುದು ಸಹಿತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ರೈಲ್ವೇ ಪ್ರಯಾಣದ ವೆಚ್ಚ ಭರಿಸಲು ಕಾಂಗ್ರೆಸ್‌ ಸಿದ್ಧವಿದೆ. ನಮ್ಮ ಜನರನ್ನು ಮತ್ತೆ ಮನೆಗೆ ವಾಪಸ್‌ ಕರೆತರಲು ರಾಜ್ಯ ಸರಕಾರ ಕೇಂದ್ರ ರೈಲ್ವೇ ಇಲಾಖೆಯೊಂದಿಗೆ ಮತುಕತೆ ನಡೆಸಿ ನಿರ್ಧಾರಕ್ಕೆ ಬರಬೇಕು. ಈ ವಿಚಾರ ದಲ್ಲಿ ರಾಜ್ಯದ ಹಿತಾಸಕ್ತಿ ಮತ್ತು ಕನ್ನಡಿಗರ ಘನತೆಯನ್ನು ಶೀಘ್ರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next