Advertisement

“ತೈಲ ಬೆಲೆ ಜಿಎಸ್‌ಟಿ ವ್ಯಾಪ್ತಿಗೆ ಬರಲಿ’ : ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್‌ ಬೆಂಬಲ

09:59 PM Feb 28, 2021 | |

ಕೋಲ್ಕತಾ: ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

Advertisement

ಎಫ್ಐಸಿಸಿಐ ಎಫ್ಎಲ್‌ಒ ಸದಸ್ಯರ ಜೊತೆಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, “”ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಉತ್ತಮವಾದ ಪರಿಕಲ್ಪನೆ. ಆದರೆ, ಈ ಬಗ್ಗೆ ಜಿಎಸ್‌ಟಿ ಮಂಡಳಿ ನಿರ್ಧಾರ ಕೈಗೊಳ್ಳಬೇಕಷ್ಟೆ” ಎಂದಿದ್ದು, “”ದೇಶದಲ್ಲಿ ತಲೆದೋರಿರುವ ಹಣದುಬ್ಬರ, ತೈಲ ಬೆಲೆಗಳ ಹೆಚ್ಚಳದಿಂದ ಆಗಿದ್ದಲ್ಲ, ಆಹಾರ ವಸ್ತುಗಳ ಬೆಲೆಯೇರಿಕೆಯಿಂದ ಆಗಿದೆ. ಹಾಗಾಗಿ, ತೈಲ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬಹುದು” ಎಂದು ವಿವರಿಸಿದರು.

ಮತ್ತೂಂದೆಡೆ, ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್‌ ಕೂಡ ಈ ಪರಿಕಲ್ಪನೆಯನ್ನು ಬೆಂಬಲಿಸಿದ್ದು, ಈ ಪರಿಕಲ್ಪನೆಯನ್ನು ಆದಷ್ಟು ಬೇಗನೇ ಸಾಕಾರಗೊಳಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ :ಮಾರ್ಚ್ 1ರಿಂದ ಎರಡನೇ ಹಂತದ ಲಸಿಕಾ ಅಭಿಯಾನ : 9 ಗಂಟೆಯಿಂದ ನೋಂದಣಿ ಪ್ರಾರಂಭ

Advertisement

Udayavani is now on Telegram. Click here to join our channel and stay updated with the latest news.

Next