ನವದೆಹಲಿ: ಭಾರತ್‌ನೆಟ್ ಯೋಜನೆಯಡಿಯಲ್ಲಿ 1.39 ಲಕ್ಷ ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂತ 6.4 ಲಕ್ಷ ಗ್ರಾಮಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ಕಲ್ಪಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಭಾರತ್‌ನೆಟ್ ಯೋಜನೆಯಡಿಯಲ್ಲಿ ಈಗಾಗಲೇ ಸುಮಾರು 1.94 ಲಕ್ಷ ಗ್ರಾಮಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ಕಲ್ಪಿಸಲಾಗಿದ್ದು, ಉಳಿದ ಗ್ರಾಮಗಳಿಗೆ ಮುಂದಿನ ಎರಡೂವರೆ ವರ್ಷಗಳಲ್ಲಿ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ದೇಶದ ಎಲ್ಲಾ ಗ್ರಾಮಗಳ ಮನೆಗಳಿಗೆ ಆಪ್ಟಿಕಲ್ ಫೈಬರ್ ಆಧಾರಿತ ಸಂಪರ್ಕ ಕಲ್ಪಿಸಲು ಕೇಂದ್ರ ಸಚಿವ ಸಂಪುಟವು ಶುಕ್ರವಾರ ಸಂಜೆ 1,39,579 ಕೋಟಿ ರೂ.ಗಳಿಗೆ ಅನುಮೋದನೆ ನೀಡಿದೆ.
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ನ ಅಂಗ ಸಂಸ್ಥೆಯಾದ ಭಾರತ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಲಿಮಿಟೆಡ್(ಬಿಬಿಎನ್‌ಎಲ್) ಗ್ರಾಮ ಮಟ್ಟದ ಉದ್ಯಮಿಗಳ ಸಹಭಾಗಿತ್ವದೊಂದಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಕಲ್ಪಿಸುತ್ತಿದೆ.
ಈ ಯೋಜನೆಯಿಂದ ದೇಶದಲ್ಲಿ 2.5 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೇ ಗ್ರಾಮಗಳ ಮನೆಗಳಿಗೆ ಬಿಬಿಎನ್‌ಎಲ್ ಡೇಟಾ ಪ್ಲ್ರಾನ್ ಮಾಸಿಕ 399 ರೂ.ಗಳಿಂದ ಆರಂಭವಾಗಲಿದೆ.