Advertisement

Andhra: ಆಂಧ್ರದಲ್ಲಿನ್ನು “ಅಣ್ಣ-ತಂಗಿ” ಸಮರ: ಶರ್ಮಿಳಾ ಈಗ ಕಾಂಗ್ರೆಸ್‌ ಅಧ್ಯಕ್ಷೆ

01:45 AM Jan 17, 2024 | Team Udayavani |

ಹೊಸದಿಲ್ಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಅವರ ಸೋದರಿ ವೈ.ಎಸ್‌.ಶರ್ಮಿಳಾರನ್ನು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ನೇಮಕ ಮಾಡಿ ಪಕ್ಷದ ಹೈಕಮಾಂಡ್‌ ಮಂಗಳವಾರ ಆದೇಶ ಹೊರಡಿಸಿದೆ. ಈ ಮೂಲಕ ಆಂಧ್ರದಲ್ಲೀಗ “ಅಣ್ಣ-ತಂಗಿ ಸಮರ’ಕ್ಕೆ ವೇದಿಕೆ ಸಿದ್ಧವಾದಂತಾಗಿದೆ.

Advertisement

ಸೋಮವಾರವಷ್ಟೇ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಆ ಸ್ಥಾನಕ್ಕೆ ಶರ್ಮಿಳಾರನ್ನು ನೇಮಿಸಲಾಗಿದೆ. ರುದ್ರರಾಜು ಅವರನ್ನು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next