Advertisement

ಐತಿಹಾಸಿಕ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ: ಪ್ರಧಾನಿ ಮೋದಿ

09:55 AM Jan 29, 2020 | Nagendra Trasi |

ನವದೆಹಲಿ: ಕೇಂದ್ರ ಸರ್ಕಾರ ಐತಿಹಾಸಿಕ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ನೆರೆಯ ದೇಶಗಳಲ್ಲಿ ವಾಸವಾಗಿರುವ ಧಾರ್ಮಿಕ ಅಲ್ಪಸಂಖ್ಯಾಕರಿಗೆ ನ್ಯಾಯ ಒದಗಿಸುವ ಬಿಜೆಪಿಯ ಹಳೆಯ ಭರವಸೆಯನ್ನು ಈಡೇರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Advertisement

ಮಂಗಳವಾರ ಎನ್ ಸಿಸಿ 2020 ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ದಿನದಿಂದಲೂ ಜಮ್ಮು ಕಾಶ್ಮೀರದ ಸಮಸ್ಯೆ ಜಟಿಲವಾಗುತ್ತ ಬಂದಿತ್ತು. ಕೆಲವು ಕುಟುಂಬಗಳು ಮತ್ತು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದವು. ಇದರ ಪರಿಣಾಮ ಭಯೋತ್ಪಾದನೆಗೆ ಅವಕಾಶ ಮಾಡಿಕೊಟ್ಟಂತಾಗಿತ್ತು ಎಂದು ಹೇಳಿದರು.

ಹಲವು ದಶಕಗಳ ಕಾಲದಿಂದ ನನೆಗುದಿಗೆ ಬಿದ್ದಿದ್ದ ಸಮಸ್ಯೆಯನ್ನು ನಮ್ಮ ಸರ್ಕಾರ ಬಗೆಹರಿಸಲು ಪ್ರಯತ್ನಿಸಿದೆ. ನೆರೆಯ ಪಾಕಿಸ್ತಾನ ಮೂರು ಬಾರಿ ಯುದ್ಧದಲ್ಲಿ ಸೋತಿದೆ. ಆದರೆ ಭಾರತದ ವಿರುದ್ಧ ಕಳ್ಳ ಯುದ್ಧ ಮಾಡುವುದನ್ನು ಮುಂದುವರಿಸಿತ್ತು ಎಂದು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೋಡೋ ಶಾಂತಿ ಒಪ್ಪಂದ, ತ್ರಿವಳಿ ತಲಾಖ್, 370ನೇ ವಿಧಿ ರದ್ದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭರವಸೆ ಈಡೇರಿಸಿರುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next