ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕಿ ಮತ್ತು ತೆಲಂಗಾಣ ವಿಧಾನಸಭೆಯ ಸದಸ್ಯೆ ಜಿ. ಲಾಸ್ಯ ನಂದಿತಾ(37) ಅವರು ಶುಕ್ರವಾರ ಸಂಗಾರೆಡ್ಡಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನಂದಿತಾ ಅವರು ಪ್ರಯಾಣಿಸುತ್ತಿದ್ದ ಕಾರು ಹೈದರಾಬಾದ್ ನ ಅಮೀನ್‌ಪುರ ಮಂಡಲದ ಸುಲ್ತಾನ್‌ಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತಾದರೂ ಅಷ್ಟರಲ್ಲೇ ನಂದಿತಾ ಅವರು ನಿಧನಹೊಂದಿದ್ದರು ಎಂದು ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ.
1986 ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದ ಲಾಸ್ಯ ನಂದಿತಾ ಸುಮಾರು ಒಂದು ದಶಕದ ಹಿಂದೆಯಷ್ಟೇ ರಾಜಕೀಯಕ್ಕೆ ಕಾಲಿಟ್ಟಿದ್ದರು. 2023 ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಶಾಸಕರಾಗಿ ಆಯ್ಕೆಯಾಗುವ ಮೊದಲು ಅವರು ಕವಾಡಿಗುಡ ವಾರ್ಡ್‌ನಲ್ಲಿ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದರು.
ನಂದಿತಾ ಅವರ ತಂದೆ ಜಿ ಸಾಯಣ್ಣ ಅವರು ಈ ಹಿಂದೆ ಸಿಕಂದರಾಬಾದ್ ಕಂಟೋನ್ಮೆಂಟ್ ನಲ್ಲಿ ಸ್ಥಾನವನ್ನು ಪಡೆದಿದ್ದರು ಆದರೆ 2023 ರಲ್ಲಿ ಅವರು ನಿಧನರಾದರು. ಅವರ ನಿಧನದ ನಂತರ, ನಂದಿತಾ BRS ನಾಮನಿರ್ದೇಶನವನ್ನು ಪಡೆದುಕೊಂಡರು ಮತ್ತು ಚುನಾವಣೆಯಲ್ಲಿ ಗೆಲುವು ಸಾಧಿಸಿದರು.
ಲಾಸ್ಯ ನಂದಿತಾ ಅವರ ನಿಧನಕ್ಕೆ ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ಪಕ್ಷದ ವತಿಯಿಂದ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Daily Horoscope: ಉದ್ಯೋಗ ರಂಗದಲ್ಲಿ ತೀವ್ರ ಪೈಪೋಟಿ, ಆಪ್ತ ವರ್ಗದಲ್ಲಿ ವಿವಾಹ ನಿಶ್ಚಯ