Advertisement

ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ: ಬಿ.ವೈ. ವಿಜಯೇಂದ್ರ

12:45 PM Jun 30, 2021 | Team Udayavani |

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಈಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ. ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

Advertisement

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ.ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದು ಹೇಳಿದರು.

ಇದನ್ನೂ ಓದಿ: ಫರ್ನೇಸ್ ಆಯಿಲ್ ಮಿಕ್ಸಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ : ನಾಲ್ವರು ವಶಕ್ಕೆ

ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ. ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಎಂದರು

ನಾನು ಚುನಾವಣೆಗೆ ನಿಲ್ಲಬೇಕೋ ಬೇಡ್ವೋ ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ. ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರೋದು ನಿಜ ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಪಕ್ಷವಯಿಸಿರೋ ಜವಾಬ್ದಾರಿ ಯನ್ನು ನಾನು ನಿಭಾಯಿಸುತ್ತಿದ್ದೇನೆ ಎಂದರು.

Advertisement

ಈ ವೇಳೆ ಮೈ ಸೇವಾ ಫೌಂಡೇಶನ್ ನಿಂದ ತರಕಾರಿ ಹಾಗೂ ದಿನಸಿ‌ಕಿಟ್ ವಿತರಣೆ ಮಾಡಿದರು. ಮೃಗಾಲಯದಲ್ಲಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮೃಗಾಲಯದಲ್ಲಿ  ಕೆಲಸ ಮಾಡುವ ಸಿಬ್ಬಂದಿಗಳಿಗೆ ಆಹಾರ ಕಿಟ್  ವಿತರಣೆ ಮಾಡಿದರು.

ಪ್ರಾಧಿಕಾರಾದ ಆಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ ಸೇರಿದಂತೆ ಇತರರು ಭಾಗಿ

Advertisement

Udayavani is now on Telegram. Click here to join our channel and stay updated with the latest news.

Next