Advertisement

ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಿಎಸ್ ವೈ ಬಂಪರ್ ಕೊಡುಗೆ; ಜವಳಿ ಪಾರ್ಕ್ ನಿರ್ಮಾಣಕ್ಕೆ ಅಸ್ತು

06:51 PM Mar 08, 2021 | Team Udayavani |

ಮಣಿಪಾಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ್ದ ಬಜೆಟ್ ಮಂಡನೆಯಲ್ಲಿ ಘೋಷಿಸಿದ್ದಾರೆ.

Advertisement

ಇದನ್ನೂ ಓದಿ:ಪ್ರಧಾನಿ ಮೋದಿಯವರ #WomensDay ಶಾಪಿಂಗ್ ಪಟ್ಟಿಯಲ್ಲಿ ಏನೇನಿದೆ..? ಇಲ್ಲಿದೆ ಮಾಹಿತಿ

ಬಾದಾಮಿ ಕ್ಷೇತ್ರದಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ಜವಳಿ ಪಾರ್ಕ್ ನಿರ್ಮಿಸಬೇಕೆಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಳಿ ಇತ್ತೀಚೆಗೆ ಮನವಿ ಮಾಡಿಕೊಂಡಿದ್ದರು.

ಅಷ್ಟೇ ಅಲ್ಲ ತಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಅನುಗ್ರಹ ಯೋಜನೆಯನ್ನು ತಡೆ ಹಿಡಿಯಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಆ ನಿಟ್ಟಿನಲ್ಲಿ ಬಿಎಸ್ ಯಡಿಯೂರಪ್ಪನವರು ಇಂದು ಮಂಡಿಸಿದ್ದ ಬಜೆಟ್ ನಲ್ಲಿ ಕುರಿ, ಮೇಕೆ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ಬಾದಾಮಿ ಕ್ಷೇತ್ರಕ್ಕೆ ಜವಳಿ ಪಾರ್ಕ್ ಮಾತ್ರವಲ್ಲ, ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಯೋಜನೆ ಆರಂಭಿಸಲು 25 ಕೋಟಿ ರೂಪಾಯಿ ಮೀಸಲಿಟ್ಟಿರುವುದಾಗಿ ಬಜೆಟ್ ನಲ್ಲಿ ತಿಳಿಸಿದೆ.

Advertisement

ಬಜೆಟ್ ಮಂಡನೆ ವೇಳೆ ಸಭೆ ಬಹಿಷ್ಕರಿಸಿ ಕಾಂಗ್ರೆಸ್ ಸಭಾತ್ಯಾಗ:

ಸಿಡಿ ಪ್ರಕರಣದ ವಿಚಾರದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದೊಂದು ನೈತಿಕತೆ ಕಳೆದುಕೊಂಡ ಸರ್ಕಾರ, ಹೀಗಾಗಿ ನಾವು ಬಜೆಟ್ ಮಂಡನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಜೆಟ್ ಮಂಡನೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಬಜೆಟ್ ಮಂಡನೆ ಆರಂಭಕ್ಕೂ ಮುನ್ನ ಕಲಾಪದಲ್ಲಿ ತೀವ್ರ ಆಕ್ರೋಶ, ಕೋಲಾಹಲ ಎಬ್ಬಿಸಿದ ಕಾಂಗ್ರೆಸ್ ಸದಸ್ಯರು ನಂತರ ಬಜೆಟ್ ಮಂಡನೆಗೂ ಮುನ್ನವೇ ಸಭಾತ್ಯಾಗ ಮಾಡಿದ್ದರು.

ಸದನದಲ್ಲೇ ಉತ್ತರ ಕೊಡುವೆ: ಬಿಎಸ್ ವೈ

ಬಜೆಟ್ ಮಂಡನೆಗೂ ಮುನ್ನ ಸಭಾತ್ಯಾಗ ಮಾಡಿರುವ ಕಾಂಗ್ರೆಸ್ ಕುರಿತು ಸುದ್ದಿಗಾರರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದು, ಸಿದ್ದರಾಮಯ್ಯನವರಿಗೆ ಏನೇ ಮಾತನಾಡುತ್ತಿದ್ದೇನೆ ಎಂದೇ ತಿಳಿದಿಲ್ಲ. ಯಾವುದು ನೈತಿಕತೆ ಎಂಬುದನ್ನು ಸದನದಲ್ಲೇ ಉತ್ತರ ಕೊಡುತ್ತೇನೆ. ಮುಂದಿನ ಚುನಾವಣೆಯಲ್ಲಿಯೂ ಸಿದ್ದರಾಮಯ್ಯನವರನ್ನು ವಿಪಕ್ಷದಲ್ಲಿ ಕೂರಿಸಿದೇ ಹೋದರೆ ನಾನು ಯಡಿಯೂರಪ್ಪನೇ ಅಲ್ಲ ಎಂದು ಈ ಸಂದರ್ಭದಲ್ಲಿ ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next