Advertisement

ಬಿಎಸ್ ವೈ –ಶಾ ಭೇಟಿ ಅನುಮಾನ: ಮುಂದಿನ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ?

11:07 AM Dec 12, 2019 | Suhan S |

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಜಾರ್ಖಂಡ್ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸದ್ಯ ಅಮಿತ್ ಶಾ ಜಾರ್ಖಂಡ್ ಚುನಾವಣೆಯ ಜವಾಬ್ದಾರಿ ಹೊತ್ತು ಅದರ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಅವರ ಜತೆ ಮಾತನಾಡಲು ಸಾಧ್ಯವಾಗಿಲ್ಲ. ಮೂರ್ನಾಲ್ಕು ದಿನಗಳ ಬಳಿಕ ಅಮಿತ್ ಶಾ ಅವರ ಕಾಲಾವಕಾಶ ಕೋರಿ ಭೇಟಿ ಮಾಡಿದ ಬಳಿಕ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ದೆಹಲಿಗೆ ಭೇಟಿ ನೀಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next