Advertisement
ಆದಾಯ ತೆರಿಗೆ ದಾಳಿಗೊಳಗಾದ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪಕ್ಷವು ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, “”ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿರಬೇಕಾದರೆ ನಾನು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದ ಡಿನೋಟಿಫಿಕೇಷನ್ ಪ್ರಕರಣ ಕೆದಕಿ ಕೇಸು ಹಾಕುವ ಪ್ರಯತ್ನ ಮಾಡುತ್ತಿದ್ದೀರಾ? ಇನ್ನು ನೂರು ಕೇಸ್‌ಗಳನ್ನಾದರೂ ಹಾಕಿ, ಹೆದರುವುದಿಲ್ಲ. ಬಡವರು ತಮ್ಮ ಜಮೀನು ಉಳಿಸಿಕೊಡಿ ಎಂದು ಕೇಳಿದಾಗ ಅವರಿಗಾಗಿ ಡಿನೋಟಿಫಿಕೇಷನ್ ಮಾಡುವುದು ಮುಖ್ಯಮಂತ್ರಿಯಾದವನ ಕರ್ತವ್ಯ. ಆ ಕೆಲಸ ಮಾಡಿದ್ದೆ. ಇತರೆ ಮುಖ್ಯಮಂತ್ರಿಗಳೂ ಮಾಡಿದ್ದಾರೆ. ಆದರೆ, ನನ್ನ ವಿರುದ್ಧ ಮಾತ್ರ ಗುರುತರ ಆರೋಪಗಳನ್ನು ಮಾಡುವ ಮೂಲಕ ಈ ಹೋರಾಟ ನಿಲ್ಲಿಸಬಹುದು ಎಂಬ ಭ್ರಮೆಯಲ್ಲಿದ್ದರೆ ಅದು ನಡೆಯುವುದಿಲ್ಲ,” ಎಂದು ಎಚ್ಚರಿಕೆ ನೀಡಿದರು.
Related Articles
Advertisement
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರಳೀಧರರಾವ್, ವಿಧಾನಸಭೆ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಸಂಸದರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಸಿ.ಟಿ.ರವಿ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಪೊಲೀಸರಿಂದ ಬಂಧನಕ್ಕೆ ಒಳಗಾದರು.
ಸೋನಿಯಾ, ರಾಹುಲ್ ಕೂಡ ಜೈಲಿಗೆ ಹೋಗಬೇಕುಕೇಂದ್ರ ಸರ್ಕಾರ ಅಭಿವೃದ್ಧಿ ಕೆಲಸಗಳಿಗಾಗಿ ಕೊಟ್ಟ ಹಣ ಖರ್ಚು ಮಾಡದೆ ಕಾಂಗ್ರೆಸ್ ನಾಯಕರು ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಆದಾಯ ತೆರಿಗೆ ದಾಳಿ ಸಂದರ್ಭದಲ್ಲಿ ಸಿಕ್ಕಿದ ಡೈರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿದೆ. ಭ್ರಷ್ಟರ ವಿರುದ್ಧ ಕ್ರಮ ಕೈಗೊಂಡರೆ ಇವರೆಲ್ಲರೂ ಜೈಲಿಗೆ ಹೋಗುತ್ತಾರೆ ಎಂಬ ಭೀತಿಯಿಂದ ಮುಖ್ಯಮಂತ್ರಿಗಳು ಭ್ರಷ್ಟ ಸಚಿವರ ರಾಜಿನಾಮೆ ಪಡೆಯುತ್ತಿಲ್ಲ.
– ಮುರಳೀಧರರಾವ್, ಬಿಜೆಪಿ ರಾಜ್ಯ ಉಸ್ತುವಾರಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು
ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಮೇಲೆ ಆದಾಯ ತೆರಿಗೆ ದಾಳಿಯಾದಾಗ ನೂರಾರು ಕೋಟಿ ರೂ. ಮೌಲ್ಯದ ತೆರಿಗೆ ವ್ಯಾಪ್ತಿಗೆ ಒಳಪಡದ ಆಸ್ತಿ ಪತ್ತೆಯಾಗಿದೆ. ಆದ್ದರಿಂದ ಅವರು ಕಳಂಕದಿಂದ ಮುಕ್ತರಾಗುವವರೆಗೆ ಸಚಿವ ಸಂಪುಟದಿಂದ ದೂರವಿಡಬೇಕು. ಜತೆಗೆ ಲೋಕಾಯುಕ್ತ ಮತ್ತು ಚುನಾವಣಾ ಆಯೋಗಕ್ಕೆ ಅವರು ಈ ಕುರಿತು ಮಾಹಿತಿ ನೀಡದ ಕಾರಣ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಬೇಕು.
– ಜಗದೀಶ್ ಶೆಟ್ಟರ್, ವಿಧಾನಸಭೆ ಪ್ರತಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಯಾರೋ ಒಬ್ಬರು ಎಸಿಬಿಯಲ್ಲಿ ದೂರು ಕೊಟ್ಟಿದ್ದಾರೆ. ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಕಾನೂನಿನಂತೆ ಯಡಿಯೂರಪ್ಪ ವಿರುದ್ಧ ಕ್ರಮವಾಗಲಿದೆ. ರಾಜ್ಯದಲ್ಲಿ ಕಾನೂನು ಜಾರಿಗೊಳಿಸಬೇಡಿ ಅಂದರೆ ಹೇಗೆ? ಕಾನೂನಿನ ಮುಂದೆ ಎಲ್ಲರೂ ಒಂದೇ. ಎಸಿಬಿಯಲ್ಲಿ ಕೇಸ್ ದಾಖಲಿಸಿದರೆ ಅದು ದ್ವೇಷದ ರಾಜಕಾರಣ ಎನ್ನುವುದಾದರೆ ಡಿ.ಕೆ.ಶಿವಕುಮಾರ್ ಅವರ ಮನೆ-ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಏನು?
– ಸಿದ್ದರಾಮಯ್ಯ, ಮುಖ್ಯಮಂತ್ರಿ.