ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ಆಯ್ಕೆಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರಿಷ್ಠರ ಭೇಟಿಗಾಗಿ ಶುಕ್ರವಾರ (ಆಗಸ್ಟ್ 26) ದಿಲ್ಲಿಗೆ ತೆರಳಿದ್ದಾರೆ.
ಇದನ್ನೂ ಓದಿ:ದ್ವೇಷ ಭಾಷಣ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ರಾಷ್ಟ್ರ ಮಟ್ಟದಲ್ಲಿ ತಮಗೆ ಉನ್ನತ ಸ್ಥಾನ ದೊರಕಿದ ಬಳಿಕ ಅವರು ಇದೇ ಮೊದಲ ಬಾರಿಗೆ ವರಿಷ್ಠರ ಭೇಟಿಗೆ ತೆರಳುತ್ತಿದ್ದು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಅವರು ದಿಲ್ಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚುನಾವಣಾ ವರ್ಷವಾಗಿರುವುದರಿಂದ ಯಡಿಯೂರಪ್ಪ ತಟಸ್ಥವಾಗಿ ಕುಳಿತುಕೊಳ್ಳದಿರುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸಂಘಟನಾತ್ಮಕವಾಗಿ ಒಂದಿಷ್ಟು ಜವಾಬ್ದಾರಿ ನೀಡುವಂತೆ ಅವರು ವರಿಷ್ಠರ ಬಳಿ ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಘಟನಾತ್ಮಕವಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ಸಮಾವೇಶ ನಡೆಸುವಂತೆ ಅವರು ವರಿಷ್ಠರ ಬಳಿ ಮನವಿ ಮಾಡುವ ಸಾಧ್ಯತೆಯೂ ಇದೆ ಎಂದು ತಿಳಿದು ಬಂದಿದೆ.