Advertisement

ಬಹುಮತ ಇಲ್ಲದಿದ್ರೂ ಬಿಎಸ್ ವೈ ಸಿಎಂ ಗದ್ದುಗೆ ಏರೋದು ಪ್ರಜಾಪ್ರಭುತ್ವಕ್ಕೆ ಮಾರಕ; ಸಿದ್ದು

08:58 AM Jul 27, 2019 | Nagendra Trasi |

ಬೆಂಗಳೂರು:ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ಶುಕ್ರವಾರ ರಾಜ್ಯಪಾಲ ವಜೂಭಾಯ್ ವಾಲಾ ಅವರನ್ನು ಭೇಟಿಯಾಗಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಮಯ ನಿಗದಿಪಡಿಸುವಂತೆ ಮನವಿ ಮಾಡಿಕೊಂಡಿದ್ದು, ಆ ನಿಟ್ಟಿನಲ್ಲಿ ಇಂದು ಸಂಜೆ 6ಗಂಟೆಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Advertisement

ಏತನ್ಮಧ್ಯೆ ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಏನಿದೆ?

ಬಿಜೆಪಿಗೆ ಬಹುಮತ ಇಲ್ಲದಿದ್ದರೂ, ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು. ಸಂವಿಧಾನದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next