Advertisement

ತ್ಯಾಜ್ಯ ನಿರ್ವಹಣೆ, ಜಲಮೂಲ ಸಂರಕ್ಷಣೆ ಆದ್ಯತೆ ಆಗಲಿ; ಸಿಎಂ

09:19 AM Feb 13, 2020 | sudhir |

ಬೆಂಗಳೂರು: ಘನತ್ಯಾಜ್ಯ ನಿರ್ವಹಣೆ, ಮಳೆ ನೀರು ಕೊಯ್ಲು, ಜಲಮೂಲಗಳು ಮತ್ತು ಪರಿಸರ ಸಂರಕ್ಷಣೆ ನಗರ ಸ್ಥಳೀಯ ಸಂಸ್ಥೆಗಳ ಆದ್ಯತೆ ಆಗಬೇಕು. ಈ ನಿಟ್ಟಿನಲ್ಲಿ ಹೆಚ್ಚು ಆವಿಷ್ಕಾರಗಳು ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕರೆ ನೀಡಿದರು.

Advertisement

ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ “16ನೇ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮ್ಮೇಳನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರವಾಹ, ಭೂಕುಸಿತದಂಥ ಪ್ರಕೃತಿ ವಿಕೋಪಗಳಿಂದ ಸಂರಕ್ಷಿತ ನಗರಗಳನ್ನು ಯೋಜಿತ ರೀತಿಯಲ್ಲಿ ರೂಪಿಸುವುದರ ಜತೆಗೆ ಜಲ ಮತ್ತು ಇಂಧನ ಮೂಲಗಳ ಮಿತವ್ಯಯ ಮತ್ತು ಸಂರಕ್ಷಣೆ ಆವಶ್ಯಕತೆ ಹಿಂದೆಂದಿಗಿಂತ ಹೆಚ್ಚಿದ್ದು, ಯೋಜಿತ ರೀತಿಯಲ್ಲಿ ನಗರಗಳನ್ನು ರೂಪಿಸಬೇಕಿದೆ ಎಂದರು.

ವಿಶ್ವದ ಎಲ್ಲ ನಗರಗಳಿಗೂ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲಾಗುವುದು ಎಂದ ಅವರು, ವಿಶ್ವದಲ್ಲಿಯೇ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಅದಕ್ಕೆ ಅನುಗುಣವಾಗಿ ಮೂಲಸೌಕರ್ಯ ಕಲ್ಪಿಸಲು ಸರಕಾರ ಅವಿರತ ಪಯತ್ನ ಮಾಡುತ್ತಿದೆ. ಇದು ಸಾಕಾರಗೊಂಡರೆ ವಿಶ್ವದ ಎಲ್ಲ ನಗರಗಳೊಂದಿಗೆ ಸಿಲಿಕಾನ್‌ ಸಿಟಿಗೆ ಸಂಪರ್ಕ ಸಾಧ್ಯವಾಲಿದೆ ಎಂದು ಹೇಳಿದರು.

ಪ್ರಸ್ತುತ ನಗರೀಕರಣ ಮಟ್ಟವು ಶೇ. 40ಕ್ಕಿಂತ ಹೆಚ್ಚಿದ್ದು, ದೇಶದಲ್ಲಿ ರಾಜ್ಯವು ನಾಲ್ಕನೇ ಸ್ಥಾನದಲ್ಲಿದೆ. ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ಸ್ಮಾರ್ಟ್‌ಸಿಟಿಯಲ್ಲಿ ಬೆಂಗಳೂರು ಕೂಡ ಒಳಗೊಂಡಿರುವುದು ಸಂತಸ ತಂದಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next