Advertisement

ಗುರುಪುರ ಗುಡ್ಡ ಕುಸಿದು ಮೃತಪಟ್ಟ ಮಕ್ಕಳ ಕುಟುಂಬಕ್ಕೆ ತಲಾ 5ಲಕ್ಷ ಪರಿಹಾರಕ್ಕೆ ಸಿಎಂ ಸೂಚನೆ

07:04 PM Jul 05, 2020 | sudhir |

ಮಂಗಳೂರು : ಗುರುಪುರದ ಬಂಗ್ಲಗುಡ್ಡ ಪರಿಸರದಲ್ಲಿ ಗುಡ್ಡ ಕುಸಿದು ಮಣ್ಣಿನ ಅವಶೇಷಗಳಡಿ ಸಿಲುಕಿ 16 ವರ್ಷದ ಬಾಲಕ ಸಫ್ವಾನ್ ಮತ್ತು 10 ವರ್ಷದ ಬಾಲಕಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 5ಲಕ್ಷ ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

Advertisement

ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಗುರುಪುರದಲ್ಲಿ ನಡೆದ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು ಆ ಪ್ರದೇಶದಲ್ಲಿದ್ದ ಸದ್ಯ 19 ಮನೆಗಳನ್ನು ತೆರವುಗೊಳಿಸಿ ಸುಮಾರು 118 ಜನರನ್ನು ಸಮೀಪದ ಸರಕಾರಿ ಶಾಲೆ/ಗ್ರಾಮ ಪಂಚಾಯತ್ ಹಾಲ್/ವಸತಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ. ಇನ್ನುಳಿದ 60 ಮನೆಗಳ ಸದಸ್ಯರನ್ನು ಕೂಡಾ ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಎನ್.ಡಿ.ಆರ್.ಎಫ್ ಮತ್ತು ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೋಲೀಸರು ಹಾಗೂ ಜಿಲ್ಲಾಡಳಿತದ ಪರಿಶ್ರಮದ ಫಲವಾಗಿಯೂ ಬಾಲಕ ಮತ್ತು ಬಾಲಕಿಯ ಜೀವವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಮೃತರ ಕುಟುಂಬಕ್ಕೆ ಆದ ದುಖ: ಭರಿಸಲು ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈಗಾಗಲೇ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳಂತೆ ಪರಿಹಾರವನ್ನು ನೀಡಲು ಮತ್ತು ಆ ಗುಡ್ಡದ ಪ್ರದೇಶದಲ್ಲಿರುವ ಜನರಿಗೆ ಜಿಲ್ಲಾಡಳಿತ ವತಿಯಿಂದ ಬೋಂಡಂತಿಲ್ಲ ಗ್ರಾಮದ ಸರ್ವೆ ನಂ 102ರಲ್ಲಿ ಗುರುತಿಸಲಾದ ಜಾಗದಲ್ಲಿ ಮನೆಗಳನ್ನು ನಿರ್ಮಿಸಿ ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next