ಬೆಂಗಳೂರು : ಕೋವಿಡ್ ಸೋಂಕು ನಿಯಂತ್ರಣ ತರುವ ಉದ್ದೇಶದಿಂದ ಜಿಲ್ಲೆಯ ಅಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸಬೇಕು, ಕುಂಟು ನೆಪ ಹೇಳಿಕೊಂಡು ಕೆಲಸಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಪೂರ್ವ ಪಶ್ಚಿಮ ಮತ್ತು ಯಲಹಂಕ ವಲಯಗಳ ಕೋವಿಡ್-19 ಉಸ್ತುವಾರಿ ಸಚಿವರುಗಳು ಹಾಗೂ ಅಧಿಕಾರಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿ ಗಳು ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಕೆಲವೊಂದು ಸೂಚನೆಗಳನ್ನು ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ವಲಯವಾರು ಸಭೆಯನ್ನು ನಡೆಸಿದ ಮುಖ್ಯಮಂತ್ರಿಗಳು. ಹೆಚ್ಚು ಹೆಚ್ಚು ಟೆಸ್ಟ್ ಮಾಡಿ, 24 ಗಂಟೆಯ ಒಳಗೆ ವರದಿ ಬರುವಂತೆ ಮಾಡಬೇಕು. ಹಾಗೂ ಪ್ರತೀ ವಾರ್ಡ್ ಗಳಲ್ಲಿ ಕೋವಿಡ್ ಸೋಂಕಿನ ಬಗ್ಗೆ ಮಾಹಿತಿ ನೀಡುವ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ತಿಳಿಸಿದ್ದಾರೆ.
ಕುಂಟು ನೆಪ ಹೇಳಿ ಕೆಲಸಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೋಳ್ಳಿ ಅಂತ ಸೂಚನೆ ನೀಡಿದರು. ಅಧಿಕಾರಿಗಳೊಂದಿಗೆ ಮಾತನಾಡಿ ನಿಮ್ಮ ನಿಮ್ಮ ವಲಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಬೇಕು. ಟಾರ್ಗೆಟ್ ರೀಚ್ ಆಗಲೇಬೇಕು ಅಂತ ತಾಕೀತು ಮಾಡಿದರು.
ಆಯಾಯ ವಲಯಗಳ ಪ್ರಗತಿ ಬಗ್ಗೆ ಪ್ರತಿ ವಾರ ನನಗೆ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಕೆಲವು ಕಡೆ ಸೋಂಕಿತರು ತಮ್ಮ ಮೊಬೈಲ್ ನಂಬರ್ ತಪ್ಪಾಗಿ ನೀಡುತ್ತಿರುವ ಕಾರಣ. ಟೆಸ್ಟ್ ಗು ಮುನ್ನ ಓಟಿಪಿ ಅಥವಾ ಬೇರೆ ರೀತಿಯ ದಾಖಲಾತಿಗಳನ್ನು ಪಡೆಯುವಂತೆ ಸೂಚಿಸಲಾಯಿತು.