Advertisement

ಆಸ್ಪತ್ರೆಯಿಂದಲೇ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಿಸಿದ ಬಿಎಸ್ ವೈ

03:25 PM Aug 05, 2020 | sudhir |

ಬೆಂಗಳೂರು :ಅತ್ತ ಅಯೋಧ್ಯೆಯಲ್ಲಿ ಪ್ರಧಾನಿ ನರೇದ್ರ ಮೋದಿಯವರಿಂದ ಭವ್ಯ ರಾಮಮಂದಿರದ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮಗಳು ನಡೆಯುತ್ತಿದ್ದರೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿ ಇದ್ದುಕೊಂಡೇ ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು.

Advertisement

ಕೋವಿಡ್ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತೆಗೆ ದಾಖಲಾಗಿರುವ ಮುಖ್ಯಮಂತ್ರಿಗಳು ಇಂದಿನ ಐತಿಹಾಸಿಕ ಕಾರ್ಯಕ್ರಮವನ್ನು ವೀಕ್ಷಿಸಿದರು.

1994ರ ಕರಸೇವೆಯ ನೆನಪು: 
ಇಂದು ರಾಮಮಂದಿರ ನಿರ್ಮಾಣದ ಭೂಮಿಪೂಜೆ ಧನ್ಯತೆಯ ಕ್ಷಣಗಳಲ್ಲಿ ಅಂದು ೧೯೯೪ರಲ್ಲಿ ತಾವು ಮಾಡಿದ ಕರಸೇವೆಯ ಕೆಲವೊಂದು ಚಿತ್ರಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಯೋಧ್ಯೆಯ ಶ್ರೀ ರಾಮಜನ್ಮಭೂಮಿಯಲ್ಲಿಯೇ ಶ್ರೀ ರಾಮಲಲ್ಲಾನ ದಿವ್ಯ, ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವ ಬಿಜೆಪಿಯ ಬದ್ಧತೆ ಹಿಂದೆ ನಿರಂತರ ಹೋರಾಟವಿದೆ ಎಂದು ಹೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next