Advertisement

ವರ್ಲ್ಡ್ ಎಕನಾಮಿಕ್ ಫೋರಂ ಗೋಷ್ಠಿಯಲ್ಲಿ ಭಾಗಿಯಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

10:03 AM Jan 24, 2020 | Team Udayavani |

ದಾವೊಸ್ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕೇಂದ್ರ ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಅವರು ವಿಷಯ ಮಂಡನೆ ಮಾಡಿದ, “Strategic outlook: India ” ಎಂಬ ಗೋಷ್ಠಿಯಲ್ಲಿ ಭಾಗವಹಿಸಿ ಗಮನ ಸೆಳೆದರು.

Advertisement

ಸಂವಾದ ಕಾರ್ಯಕ್ರಮದ ಅಂತ್ಯದಲ್ಲಿ ದೇಶದ ಬೆಳವಣಿಗೆಯಲ್ಲಿ ರಾಜ್ಯಗಳ ಪಾತ್ರದ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲ ಆರ್ಥಿಕ ಚಟುವಟಿಕೆಗಳೂ ರಾಜ್ಯಗಳಲ್ಲಿ ನಡೆಯುವುದರಿಂದ, ದೇಶದ ಆರ್ಥಿಕತೆಯ ಬೆಳವಣಿಗೆಗೆ ರಾಜ್ಯಗಳ ಬೆಳವಣಿಗೆ ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಕನಸನ್ನು ಸಾಕಾರಗೊಳಿಸಲು ರಾಜ್ಯಗಳು ತಮ್ಮ ಆರ್ಥಿಕ ಚಟುವಟಿಕೆಗಳನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂದು ತಿಳಿಸಿದರು.

“ನನ್ನ ರಾಜ್ಯ ಕರ್ನಾಟಕ 250 ಬಿಲಿಯನ್ ಡಾಲರ್ ಜಿಡಿಪಿಯನ್ನು ಹೊಂದಿದ್ದು, ಶೇ. 9 ರ ಬೆಳವಣಿಗೆ ದರ ಹೊಂದಿದೆ. ಈ ಸಮಾವೇಶದಲ್ಲಿ ನಾವು ಹೂಡಿಕೆದಾರರು ಮತ್ತು ಉದ್ಯಮಿಗಳನ್ನು ಭಾರತದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದ್ದೇವೆ. ಇದಕ್ಕೆ ಉತ್ತಮ ಸ್ಪಂದನೆ ದೊರೆಯುವ ವಿಶ್ವಾಸವಿದೆ” ಎಂದು ತಿಳಿಸಿದರು.

ಹೂಡಿಕೆದಾರರೂ ಸಹ ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಆಶಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಅಭಿಪ್ರಾಯ ಪಟ್ಟ ಅವರು, ಸಂವಾದದ ಕುರಿತು ಅಭಿಪ್ರಾಯ ತಿಳಿಸಲು ಅವಕಾಶ ದೊರೆತುದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಪಿಯುಷ್ ಗೋಯಲ್ ವಿಷಯ ಮಂಡಿಸಿ, ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next