Advertisement

BS Yediyurappa; ಪಾಕ್‌ ಪರ ಘೋಷಣೆ ಅಕ್ಷಮ್ಯ ಅಪರಾಧ: ಬಿಎಸ್‌ವೈ

05:56 PM Feb 28, 2024 | Shreeram Nayak |

ಶಿವಮೊಗ್ಗ:ಪಾಕ್‌ ಪರ ಘೋಷಣೆ ಕೂಗಿರುವುದು ಅಕ್ಷಮ್ಯ ಅಪರಾಧ. ಈಗಾಗಲೇ ಪರಿಷತ್‌ ಹಾಗೂ ವಿಧಾನ ಸಭೆಯಲ್ಲಿ ಚರ್ಚೆ ನಡೆದಿದೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

Advertisement

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನೊಂದಿಗಿನ ಮೈತ್ರಿ ನಮಗೆ ದೊಡ್ಡ ಶಕ್ತಿ ತಂದು ಕೊಟ್ಟಂತಾಗಿದೆ. ಬರುವ ದಿನಗಳಲ್ಲಿ ಜೆಡಿಎಸ್‌, ಕುಮಾರಸ್ವಾಮಿ ಜತೆ ಒಟ್ಟಾಗಿ ಒಂದಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆದಿದೆ. ಇದಕ್ಕೆ ಪೂರಕವಾಗಿ ಜೆಡಿಎಸ್‌ ಶಾಸಕಿ ಶಾರದಾ ಪೂರ್ಯಾನಾಯ್ಕ ನಮ್ಮ ಜತೆ ಬಂದಿದ್ದಾರೆ.

ಲೋಕಸಭೆ ಚುನಾವಣೆ ಎದುರಿಸಲು ಸಿದ್ಧತೆ ನಡೆದಿದೆ. 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆಲ್ಲುತ್ತೇವೆ. ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುತ್ತೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next