Advertisement

ಮುರುಘಾ ಶರಣರದ್ದು ಅಕ್ಷಮ್ಯ ಅಪರಾಧ, ಕಾನೂನಿನನ್ವಯ ಶಿಕ್ಷೆಯಾಗಬೇಕು: ಮಾಜಿ ಸಿಎಂ ಯಡಿಯೂರಪ್ಪ

02:59 PM Nov 08, 2022 | Team Udayavani |

ಉಡುಪಿ: ಮುರುಘಾ ಶರಣರು ಅಕ್ಷಮ್ಯ ಅಪರಾಧ ಮಾಡಿರುವುದು ಇಡೀ ಜಗತ್ತಿಗೆ ತಿಳಿಯುತ್ತಿದೆ. ಅವರು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು ಮತ್ತು ಅವರಿಗೆ ಕಾನೂನಿನ್ವಯ ತಕ್ಕ ಶಿಕ್ಷೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಆದಿಉಡುಪಿ ಹೆಲಿಪ್ಯಾಡ್‌ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಸತೀಶ್ ಜಾರಕಿಹೊಳಿಯವರು ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿರುವುದು ಖಂಡನೀಯ. ಕಾಂಗ್ರೆಸ್‌ನವರು ಇದನ್ನು ಖಂಡಿಸಿದರೆ ಸಾಲದು, ಸತೀಶ್ ಜಾರಕಿಹೊಳಿಯವರು ದೇಶದ ಜನರ ಕ್ಷಮೆ ಯಾಚಿಸಬೇಕು. ಈ ರೀತಿ ಹಗುರವಾಗಿ ಮಾತನಾಡುವುದು ದೊಡ್ಡತನ ಎಂಬ ಭ್ರಮೆಯಲ್ಲಿದ್ದಾಾರೆ. ಹಿಂದೂಗಳಿಗೆ ಅಪಮಾನ ಮಾಡದೇ ಇನ್ನಾದರು ಗೌರವಯುತವಾಗಿ ನಡೆದುಕೊಳ್ಳಲು ಸಲಹೆ ನೀಡಿದರು.

ಸಿದ್ದರಾಮಯ್ಯ ಅವರು ಯಾವುದೋ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನತೆ ಅವರ ಜೇಬಿನಲ್ಲಿದ್ದಾರೆ ಎಂಬಂತೆ ಮಾತನಾಡುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಎಂದಿಗೂ ಸಾಧ್ಯವಿಲ್ಲ. ಬಿಜೆಪಿ 140ಕ್ಕೂ ಅಧಿಕ ಸೀಟುಗಳನ್ನು ಗೆಲ್ಲಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕರಾವಳಿ ಸಹಿತವಾಗಿ ಇಡೀ ರಾಜ್ಯದಲ್ಲಿ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಕರಾವಳಿಯಲ್ಲಿ ನೂರಕ್ಕೆ ನೂರು ನಮ್ಮ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ ಎಂದರು.

ಬಾದಮಿಯಲ್ಲಿ ಸಿದ್ದರಾಮಯ್ಯ ಅವರಿಗೆ ಸೋಲು ನಿಶ್ಚಿತವಾಗಿದೆ. ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತದಿಂದ ಗೆದ್ದ ಅನಂತರದಲ್ಲಿ ಕ್ಷೇತ್ರವನ್ನು ಸಂಪೂರ್ಣವಾಗಿ ಮರೆತು ಬಿಟ್ಟಿದ್ದಾರೆ. ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನತೆಯೇ ಉತ್ತರ ನೀಡಲಿದ್ದಾರೆ. ಬಿಜೆಪಿಗೆ ಬೇರೆ ಪಕ್ಷದಿಂದಲೂ ನಾಯಕರು ಸೇರ್ಪಡೆಯಾಗುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next