Advertisement

Bengaluru: ಅನುದಾನದ ಹೆಸರಿನಲ್ಲಿ ಕಾಂಗ್ರೆಸ್‌ ಜನರ ದಾರಿ ತಪ್ಪಿಸಲು ಯತ್ನ: ಬಿಎಸ್‌ವೈ

10:21 PM Apr 11, 2024 | Team Udayavani |

ಬೆಂಗಳೂರು: ಅನುದಾನದ ಹೆಸರಿನಲ್ಲಿ ಜನರ ದಾರಿ ತಪ್ಪಿಸಿ ಕೇಂದ್ರದ ವಿರುದ್ಧ ವಿವಾದ ಸೃಷ್ಟಿಸುವ ಭ್ರಮೆಯಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ. ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದ ಸಿದ್ದರಾಮಯ್ಯ ಸರಕಾರ, ಇದುವರೆಗೆ ಒಂದು ಕಾಳು ಅಕ್ಕಿಯನ್ನೂ ಉಚಿತವಾಗಿ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ಪ್ರಧಾನಿಯಾದರೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಹೇಳಿದ್ದು, ಎಲ್ಲಿ ಉದ್ಯೋಗ ಕೊಟ್ಟಿದ್ದಾರೆ ಎಂದು ಪ್ರಶ್ನಿಸುವ ಕಾಂಗ್ರೆಸಿಗರು ವಾಸ್ತವವನ್ನು ಮುಚ್ಚಿಡುತ್ತಿದ್ದಾರೆ. ಆದರೆ ಕಳೆದ ಹತ್ತು ವರ್ಷಗಳಲ್ಲಿ ಭವಿಷ್ಯ ನಿಧಿ ಖಾತೆ 22.5 ಕೋಟಿಗೆ ಏರಿಕೆಯಾಗಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ 7 ಕೋಟಿ ಜನರು ಹೊಸ ಉದ್ಯೋಗ ಪಡೆದಿದ್ದಾರೆ. ಆದರೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಹತ್ತು ತಿಂಗಳಾದರೂ ಸಿದ್ದರಾಮಯ್ಯ ಸರಕಾರ ಒಂದೇ ಒಂದು ಉದ್ಯೋಗ ಸೃಷ್ಟಿಸಿಲ್ಲ. ಸಚಿವರಾದ ಎಂ.ಬಿ.ಪಾಟೀಲ್‌ ಹಾಗೂ ಪ್ರಿಯಾಂಕ್‌ ಖರ್ಗೆಯವರ “ಎಕ್ಸ್‌’ ಖಾತೆಯಲ್ಲಿ ಮಾತ್ರ ಉದ್ಯೋಗ ಸೃಷ್ಟಿಯಾಗಿದೆ ಎಂದು ವ್ಯಂಗ್ಯವಾಡಿದರು.

ರಾಹುಲ್‌ ಕ್ಷಮೆ ಕೇಳಲಿ
ಕಾಂಗ್ರೆಸ್‌ ನಾಯಕರು ಲೋಕಸಭಾ ಚುನಾವಣೆಯನ್ನು ಸಂಪೂರ್ಣ ಮರೆತಂತೆ ಕಾಣುತ್ತದೆ. ರಾಹುಲ್‌ ಗಾಂಧಿಯವರ ಹೆಸರು ಹೇಳಲಾಗದ ವಿಚಿತ್ರ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ನಾಯಕರಿದ್ದು, ಕಾಂಗ್ರೆಸ್‌ಗೆ ವಿಶ್ವಾಸಾರ್ಹತೆಯೇ ಇಲ್ಲ ಎಂದರು.

ರಾಜ್ಯದ ಎಚ್‌ಎಎಲ್‌ ಮುಚ್ಚಲು ಕೇಂದ್ರ ಸರಕಾರ ಹೊರಟಿದೆ ಎಂದು ಅವರು ಈ ಹಿಂದೆ ಅಪಪ್ರಚಾರ ನಡೆಸಿದ್ದರು. ರಾಹುಲ್‌ ಕ್ಷಮೆ ಕೇಳುವಂತೆ ಡಿ.ಕೆ.ಶಿವಕುಮಾರ್‌ ಆಗ್ರಹಿಸಬೇಕು ಎಂದು ಆಗ್ರಹಿಸಿದರು.

ಚುನಾವಣ ಸಮಿತಿ ಸಂಚಾಲಕ ವಿ.ಸುನೀಲ್‌ ಕುಮಾರ್‌, ಬಿಜೆಪಿ ಉಪಾಧ್ಯಕ್ಷ ಬೈರತಿ ಬಸವರಾಜ್‌ ಉಪಸ್ಥಿತರಿದ್ದರು.

Advertisement

ಇದನ್ನೂ ಓದಿ: Bengaluru: ಪ್ರಧಾನಿ ಮೋದಿ ಜತೆ ವೇದಿಕೆಯಲ್ಲಿ ದೇವೇಗೌಡ, ಪ್ರಸಾದ್‌, ಬಿಎಸ್‌ವೈ

Advertisement

Udayavani is now on Telegram. Click here to join our channel and stay updated with the latest news.

Next