Advertisement

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

12:07 PM May 11, 2024 | Team Udayavani |

ಮೈಸೂರು: ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಯಾವುದೇ ಕಾರಣಕ್ಕೂ ಕೊನೆಗೊಳ್ಳಲ್ಲ ಮುಂದುವರೆಯುತ್ತದೆ ಅಲ್ಲದೆ ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಜೆ.ಡಿ.ಎಸ್ ಬಿಜೆಪಿ ಮೈತ್ರಿ ಮುಂದುವರೆಯುತ್ತೆ ಮೈತ್ರಿಗೆ ಯಾವುದೆ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರಲಿದ್ದು ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಆದರೆ ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ ಇಂದು ಸಂಜೆ ನಡೆಯುವ ಸಭೆಯಲ್ಲಿ ಯಾವ ಕ್ಷೇತ್ರ ಬಿಟ್ಟು ಕೊಡುವುದೆಂದು ಜೆಪಿ ನಡ್ಡ ತಿಳಿಸಲಿದ್ದಾರೆ ಎಂದು ಹೇಳಿದರು.

ನರೇಂದ್ರ ಮೋದಿಯವರು 400 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೆ ಸತ್ಯ ಎಂದು ಹೇಳಿದರು. ಅಲ್ಲದೆ ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತನೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾ‌ನ ಗೆಲ್ಲುತ್ತೇನೆ.

ಕಾಂಗ್ರೆಸ್ ನವರು ಏನೇ ಹೇಳಿದ್ರು ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದರು.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿಹೋಗಿದೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನ ಮಾಡಿ ರೈತರಿಗೆ ನೆರವಾಗಬೇಕು. ಸಾಲಮನ್ನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆಂದು ಹೇಳಿದರು.

Advertisement

ಇನ್ನು ಪ್ರಜ್ವಲ್ ರೇವಣ್ಣ ವಿಚಾರವಾಗಿ ಹೇಳಿಕೆ ನೀಡಿದ ಅವರು ತನಿಖೆ ಪಾರದರ್ಶನಕವಾಗಿ ನಡೆಯಬೇಕಿದ್ರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯವೂ ಇದೇ ಆಗಿದೆ ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದರು.

ಇದೇ ವೇಳೆ ಈಶ್ವರಪ್ಪ ಕುರಿತು ಪತ್ರಕರ್ತರು ಪ್ರಶ್ನೆ ಕೇಳುತ್ತಿದಂತೆ ಈ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ ಎಂದ ಬಿಎಸ್ ವೈ ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಲೀಡ್ ಗಳಿಂದ ಗೆಲ್ಲುತ್ತಾರೆ ಎಂದು ಹೇಳಿ ನಡೆದರು.

ಇದನ್ನೂ ಓದಿ: Cyber ​​thieves: ರೂಪಾ ಅಯ್ಯರ್‌ಗೆ ವಂಚಿಸಲು ಸೈಬರ್‌ ಕಳರ ಯತ್ನ

Advertisement

Udayavani is now on Telegram. Click here to join our channel and stay updated with the latest news.

Next