Advertisement

ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬಿಎಸ್ ವೈ

06:57 PM Jan 19, 2021 | Team Udayavani |

ತೆಕ್ಕಟ್ಟೆ : ಕುಂಭಾಸಿ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಜ.19 ರಂದು ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಗುರುತಿಸಿ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಬಿ.ವೈ.ರಾಘವೇಂದ್ರ, ದೇವಳದ ಧರ್ಮದರ್ಶಿ ದೇವರಾಯ ಮಂಜುನಾಥ ಶೇರೆಗಾರ್‌, ಅನಿತಾ ಶೇರೆಗಾರ್‌, ದೇವಳದ ಪ್ರಧಾನ ಅರ್ಚಕ ಅನಂತ ಪುರಾಣಿಕ್‌, ಉದ್ಯಮಿ ಸುರೇಶ್‌ ಬೆಟ್ಟಿನ್‌, ಹೊಸ್ಮನೆ ಗಂಗಾಧರ, ದೇಗುಲದ ಧಾರ್ಮಿಕ ಉಸ್ತುವಾರಿ ಮೋಹನದಾಸ್‌ ಶೇರೆಗಾರ್‌, , ದೇವಳದ ವ್ಯವಸ್ಥಾಪಕ ರಾಜಶೇಖರ ಹೆಗ್ಡೆ ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next