Advertisement

Online ಗೇಮ್‌ ಚಟಕ್ಕೆ ಬಿಎಸ್‌ಸಿ ಮೊದಲ ವರ್ಷದ ವಿದ್ಯಾರ್ಥಿನಿ ಬಲಿ

02:56 PM Jun 18, 2024 | Team Udayavani |

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಶುಲ್ಕ ಕಟ್ಟಲು ಪೋಷಕರು ನೀಡಿದ್ದ ಹಣವನ್ನು ಜೂಜಾಟವಾಡಿ ಕಳೆದುಕೊಂಡು ಆ ಹಣ ಹೊಂದಿಸಲು ಸಾಧ್ಯವಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಕೋಲಾರ ಶ್ರೀನಿವಾಸಪುರ ಮೂಲದ ಪಾವನ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ವಿವಿ ಹಾಸ್ಟೆಲ್‌ ನಲ್ಲಿ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಈ ಸಂಬಂಧ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಪಾವನಾ, ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಮೂರು ದಿನ ರಜೆ ಇದ್ದ ಹಿನ್ನೆಲೆಯಲ್ಲಿ ಹಾಸ್ಟೆಲ್‌ನಲ್ಲಿ ಸಹ ಪಾಠಿಗಳು ತಮ್ಮ ಊರುಗಳಿಗೆ ತೆರಳಿದ್ದರು. ವಿವಿ ಹಾಸ್ಟೆಲ್‌ನಲ್ಲಿ ಭಾನು ವಾರ ರಾತ್ರಿ ಒಬ್ಬಳೇ ಇದ್ದ ಪಾವನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ಕುರ್ಚಿ ಕೆಳಗಡೆ ಬಿದ್ದು ಜೋರಾದ ಶಬ್ದವಾಗಿದ್ದು, ಶಬ್ದ ಕೇಳಿ ಓಡಿ ಬಂದ ಪಕ್ಕದ ರೂಮ್‌ನ ಸಹಪಾಠಿಗಳಿಗೆ ಪಾವನಾ ವೇಲ್‌ನಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

Advertisement

ಸ್ಥಳಕ್ಕೆ ದೌಡಾ ಯಿಸಿ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತಕ್ಷಣವೇ ಆಕೆಯ ಪಾಲಕರಿಗೆ ಮಾಹಿತಿ ನೀಡಿ ತನಿಖೆ ಕೈಗೊಂಡಿ ದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಪಾಲಕರಿಗೆ ಮೃತದೇವನ್ನು ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಪಾವನಾ ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದಿದ್ದಳು. ಪಾಲಕರು ಕಾಲೇಜು ಶುಲ್ಕ ಪಾವತಿಸಲು 15 ಸಾವಿರ ರೂ. ನೀಡಿದ್ದರು. ಅದನ್ನು ಪಾವನಾ ಆನ್‌ಲೈನ್‌ ಗೇಮಿಂಗ್‌ ಆಡಿ ಸಂಪೂ ರ್ಣ ಹಣ ಕಳೆದು ಕೊಂಡಿದ್ದಳು. ಪಾಲಕರು ಹಣ ಎಲ್ಲಿ ಎಂದು ಕೇಳಿದರೆ ಏನೆಂದು ಉತ್ತರಿಸುವುದು ಅಂತಾ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.

ಆನ್‌ಲೈನ್‌ ಗೇಮ್‌ನಲ್ಲಿ 15 ಸಾವಿರ ರೂ. ಕಳೆದುಕೊಂಡಿದ್ದಳು. ಹೀಗಾಗಿ ಸ್ನೇಹಿತರ ಬಳಿ 10 ಸಾವಿರ ರೂ. ಹೊಂದಿಸಿದ್ದ ಪಾವನಾ, ಉಳಿದ 5 ಸಾವಿರ ರೂ. ಹೊಂದಿಸಲು ಸಾಧ್ಯ ವಾಗದೆ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹಣ ಕಳೆದುಕೊಂಡಿದ್ದಕ್ಕೆ ಆತ್ಮಹತ್ಯೆ: ಡೆತ್‌ನೋಟ್‌ ವಿದ್ಯಾರ್ಥಿ ಪಾವನಾ ಮೃತದೇಹ ಬಳಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಿದ್ಯಾರ್ಥಿನಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಿದ್ದಾಳೆ. ಆದರೆ ತನಿಖೆ ವೇಳೆ ವಿದ್ಯಾರ್ಥಿ ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡಿರುವುದು ಕಂಡು ಬಂದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next