ಬೆಂಗಳೂರು: ಮೊದಲ ವರ್ಷದ ಬಿಎಸ್ಸಿಯ ಎರಡು ವಿಷಯಗಳಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಬೇಸರಗೊಂಡು ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರ ಮೂಲದ ತನ್ವೀರ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಭಾನುವಾರ ಮಧ್ಯಾಹ್ನ ಪೋಷಕರು ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಪೇಯಿಂಗ್ ಗೆಸ್ಟ್ (ಪಿ.ಜಿ.) ಮಾಲೀಕರು ಕೋಣೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಜಮ್ಮು-ಕಾಶ್ಮೀರ ಮೂಲದ ತನ್ವೀರ್ ನಗರದ ಹೊರವಲಯದ ರೇವಾ ವಿಶ್ವವಿದ್ಯಾಲಯದಲ್ಲಿ 2ನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಕಟ್ಟಿಗೇನಹಳ್ಳಿ ಪಿ.ಜಿ.ಯಲ್ಲಿ ನೆಲೆಸಿದ್ದ. ಮೊದಲ ವರ್ಷದ ಬಿಎಸ್ಸಿ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದ. ಅದರಿಂದ ಮನನೊಂದು ಪಿ.ಜಿ.ರೂಮ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ಮಧ್ಯಾಹ್ನ ಪೋಷಕರು ತನ್ವೀರ್ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡು ಪಿ.ಜಿ.ಮಾಲೀಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ ಪಿ.ಜಿ.ಮಾಲೀಕರು ರೂಮ್‌ಗೆ ತೆರಳಿ ನೋಡಿದಾಗ ತನ್ವೀರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದರು.
ಸೋಮವಾರ ಸಂಜೆ ಜಮ್ಮು-ಕಾಶ್ಮೀರದಿಂದ ಪೋಷಕರು ನಗರಕ್ಕೆ ಬಂದಿದ್ದು, ಅವರ ಅನುಮತಿ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ವಾರಸು ದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ನನ್ನ ಸಾವಿಗೆ ನಾನೇ ಕಾರಣ: ಡೆತ್‌ನೋಟ್: ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀ ಸರು ಪರಿಶೀಲಿಸಿ, ಮೃತದೇಹವನ್ನು ಮರಣೋ ತ್ತರ ಪರೀಕ್ಷೆಗೆ ಸಮೀಪದ ಆಸ್ಪತ್ರೆಗೆ ರವಾನಿಸಿ ದ್ದಾರೆ. ಬಳಿಕ ಜಮ್ಮು-ಕಾಶ್ಮೀರದಲ್ಲಿರುವ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಮರಣಪತ್ರ ಸಿಕ್ಕಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿರುವುದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಮರಣಪತ್ರದಲ್ಲಿ ಉಲ್ಲೇಖೀಸಿರುವುದು ಪತ್ತೆಯಾಗಿದೆ.