ಮುಂಬಯಿ : ಏಶ್ಯನ್ ಶೇರು ಪೇಟೆಗಳಲ್ಲಿ ದೌರ್ಬಲ್ಯ ತೋರಿ ಬಂದ ಹೊರತಾಗಿಯೂ ಮುಂಬಯಿ ಶೇರು ಪೇಟೆಯಲ್ಲಿಂದು ಹೂಡಿಕೆದಾರರು ಮತ್ತು ವಹಿವಾಟುದಾರರು ಐಟಿ, ಬ್ಯಾಂಕಿಂಗ್ ಮತ್ತು ಆಟೋ ಶೇರುಗಳ ಖರೀದಿಯಲ್ಲಿ ಆಸಕ್ತಿ ತೋರಿದ ಪರಿಣಾವಾಗಿ ಸೆನ್ಸೆಕ್ಸ್ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 70 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ನಿನ್ನೆ ಮಂಗಳವಾರದ ವಹಿವಾಟನ್ನು ಸೆನ್ಸೆಕ್ಸ್ 72 ಅಂಕಗಳ ನಷ್ಟದಲ್ಲಿ ಕೊನೆಗೊಳಿಸಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 25 ಪೈಸೆಯಷ್ಟು ಸುಧಾರಿಸಿ 63.78 ರೂ. ಮಟ್ಟಕ್ಕೇರಿತು.
ಇಂದು ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್ 143.86 ಅಂಕಗಳ ಮುನ್ನಡೆಯೊಂದಿಗೆ 34,914.91 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 34 ಅಂಕಗಳ ಮುನ್ನಡೆಯೊಂದಿಗೆ 10,734.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇನ್‌ಫೋಸಿಸ್, ಐಸಿಐಸಿಐ ಬ್ಯಾಂಕ್, ಟಿಸಿಎಸ್, ರಿಲಯನ್ಸ್, ಎಚ್ ಡಿ ಎಫ್ ಸಿ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಮುಂಬಯಿ ಶೇರು ಪೇಟೆಯಲ್ಲಿ ಬೆಳಗ್ಗಿನ ವಹಿವಾಟಿನಲ್ಲಿ 2,618 ಶೇರುಗಳು ವಹಿವಾಟಿಗೆ ಒಳಪಟ್ಟಿದ್ದವು; 846 ಶೇರುಗಳು ಮುನ್ನಡೆ ಕಂಡವು, 1,667 ಶೇರುಗಳು ಹಿನ್ನಡೆಗೆ ಗುರಿಯಾದವು; 105 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.