ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿ ಬಂದಿರುವುದರ ಜತೆಗೆ ಕೆಲವೊಂದು ಬ್ಲೂ ಚಿಪ್ ಕಂಪೆನಿಗಳ ತ್ತೈಮಾಸಿಕ ಫಲಿತಾಂಶ ಆಶಾದಾಯಕವಾಗಿರುವ ಭರವಸೆಯ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 156 ಅಂಕಗಳ ಮುನ್ನಡೆಯನ್ನು ಕಂಡಿತು.
ಡಾಲರ್ ಎದುರು ರೂಪಾಯಿ ವಿನಿಮಯ ದರ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 11 ಪೈಸೆಯಷ್ಟು ಸುಧಾರಿಸಿರುವುದು ಕೂಡ ಶೇರು ಮಾರುಕಟ್ಟೆಯ ತೇಜಿಗೆ ಪರೋಕ್ಷವಾಗಿ ಕಾರಣವಾಯಿತು.
ಇದೇ ವೇಳೆ ರಾಷ್ಟ್ರೀಯ ಶೇರು ಮಾರಕಟ್ಟೆಯ ನಿಫ್ಟಿ ಸೂಚ್ಯಂಕ 34 ಅಂಕಗಳ ಏರಿಕೆಯನ್ನು ದಾಖಲಿಸಿ ಹೂಡಿಕೆದಾರರಲ್ಲಿ ಹೊಸ ವಿಶ್ವಾಸವನ್ನು ತುಂಬಿತು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 136.28 ಅಂಕಗಳ ಏರಿಕೆಯೊಂದಿಗೆ 32,643 ಅಂಕಗಳ ಮಟ್ಟದಲ್ಲೂ, ನಿಫ್ಟಿ 42.50 ಅಂಕಗಳ ಮುನ್ನಡೆಯೊಂದಿಗೆ 10,227.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಸೆನ್ಸೆಕ್ಸ್ ನಿನ್ನೆ ಸೋಮವಾರದ ವಹಿವಾಟಿನಲ್ಲಿ 116.76 ಅಂಕಗಳ ಏರಿಕೆಯನ್ನು ದಾಖಲಿಸಿತ್ತು.
ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಎಕ್ಸಿಸ್ ಬ್ಯಾಂಕ್, ಭಾತಿರ ಏರ್‌ಟೆಲ್, ರಿಲಯನ್ಸ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.